spot_img
Wednesday, April 1, 2026
spot_img

ನವದೆಹಲಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಜೋಶಿ

ಜನಪ್ರತಿನಿಧಿ (ಬೆಂಗಳೂರು) : 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಆಯೋಜಿಸಲು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಣಿಯಲ್ಲಿ ತೀರ್ಮಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.

ರಾಜ್ಯದ ಸಂಸದರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿರುವುದಕ್ಕೆ ಅಭಿನಂದಿಸಿರುವ ಅವರು, ಈ ಬಗ್ಗೆ ತಿಳಿಸಿದ್ದಾರೆ.

ಡಿ. 20ರಿಂದ 22ರವರೆಗೆ ಮಂಡ್ಯದಲ್ಲಿ 87ನೇ ಸಾಹಿತ್ಯ ಸಮ್ಮೇಳನ ಡಿ ನಡೆಯಲಿದೆ. ಪ್ರತಿ ಬಾರಿ ಸಾಹಿತ್ಯ ಸಮ್ಮೇಳನದ ಅವಧಿಯಲ್ಲಿ ಕಾರ್ಯಕಾರಿಣಿ ಸಭೆ ನಡೆಸಿ, ಮುಂದಿನ ಸಮ್ಮೇಳನದ ಆತಿಥ್ಯವನ್ನು ನಿರ್ಧರಿಸಲಾಗುತ್ತಿತ್ತು. ಆದರೆ, ಈ ಬಾರಿ ಈಗಾಗಲೇ ಮುಂದಿನ ಸಮ್ಮೇಳನವನ್ನು ನವದೆಹಲಿಯಲ್ಲಿ ನಡೆಸುವುದಾಗಿ ತಿಳಿಸಿ, ಸಮ್ಮೇಳನಕ್ಕೆ ರಾಜ್ಯದ ಸಂಸದರು ಸಂಪೂರ್ಣ ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ.

‘ಸಂಸದರ ಕನ್ನಡ ಪ್ರೇಮವು ಪ್ರಮಾಣ ವಚನ ಸ್ವೀಕಾರಕ್ಕೆ ಮಾತ್ರ ಸೀಮಿತವಾಗದೆ, ಸಂಸದೀಯ ವ್ಯವಹಾರಕ್ಕೂ ಅನ್ವಯವಾಗಲಿ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!