spot_img
Saturday, February 14, 2026
spot_img

ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್: ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ

ತೆಕ್ಕಟ್ಟೆ: ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ತೆಕ್ಕಟ್ಟೆಯಲ್ಲಿ ನೂತನ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಕಾರ್‍ಯಕ್ರಮ ಇತ್ತೀಚೆಗೆ ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಶಾರದಾ ಕಾಲೇಜು ಬಸ್ರೂರು ಇದರ ನಿವೃತ್ತ ಪ್ರಾಧ್ಯಾಪಕ ರೋ. ಹೆಚ್. ಜಗದೀಶ್ ಅವರು ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿ ಪದಗ್ರಹಣವನ್ನು ನೆರವೇರಿಸಿದರು. ವಿದ್ಯಾರ್ಥಿ ನಾಯಕರನ್ನು ಅಭಿನಂದಿಸಿ ಉತ್ತಮ ನಾಯಕತ್ವವನ್ನು ನಡೆಸಲು ಶಿಸ್ತು ಪಾಲನೆ ಬಹುಮುಖ್ಯ ಅಂಶವೆಂದು ತಿಳಿಸಿದರು. ಉತ್ತಮ ನಾಯಕನಲ್ಲಿ ಜೀವನ ಮೌಲ್ಯಗಳು, ಮಾನವೀಯ ಮೌಲ್ಯಗಳು ಹೊಂದಿದ್ದು ಇತರರನ್ನು ಅರಿತುಕೊಂಡು ಮುನ್ನಡೆಯುವ ಮನೋಭಾವನೆ ಇರಬೇಕೆಂದು ತಿಳಿಸಿದರು. ಗುರು ಹಿರಿಯರಿಗೆ, ತಂದೆ ತಾಯಿಗಳಿಗೆ ವಿಧೇಯರಾಗಿದ್ದು ಅವರ ಮಾರ್ಗದರ್ಶನದಲ್ಲಿ ಮುನ್ನಡೆದರೆ ಜೀವನದಲ್ಲಿ ಯಶಸ್ಸು ಗಳಿಸಬಹುದೆಂದು ತಿಳಿಸಿದರು. ಪ್ರತಿಯೊಂದು ಸೋಲು ಗೆಲುವುಗಳಿಂದ ಪಾಠವನ್ನು ಕಲಿತು ಬದುಕನ್ನು ಮುನ್ನಡೆಸಿಕೊಂಡು ಹೋಗುವವನೇ ನಿಜವಾದ ನಾಯಕನಾಗಲು ಅರ್ಹ ಎಂದು ತಿಳಿಸಿದರು. ಇತರರನ್ನು ಮುನ್ನಡೆಸಿ ಮುನ್ನಡೆಯುವುದೇ ನಾಯಕತ್ವ ಎಂದು ತಿಳಿಸಿದರು. ಪ್ರತೀಯೊಬ್ಬರಿಗೂ ಈ ದೇಶದ ಸಂವಿಧಾನ ಹಾಗೂ ಕಾನೂನಾತ್ಮಕ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಶಾಲಾ ಅಕಾಡಮಿಕ್ ಡೈರೆಕ್ಟರ್ ದಿವಾಕರ ಶೆಟ್ಟಿ ಹೆಚ್ ಅವರು ಮಾತನಾಡಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವನೆ ಇರಬೇಕು, ಸ್ಪರ್ಧೆಯಲ್ಲಿ ಸೋಲು ಗೆಲುವು ಸಹಜ ಇದನ್ನು ಸಮಾನ ಮನಸ್ಸಿನಿಂದ ಸ್ವೀಕರಿಸಿ ಮುನ್ನಡೆಯಬೇಕೆಂದು ತಿಳಿಸಿದರು.

ಕಾರ್‍ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು ಮಾತನಾಡಿ ನಾಯಕರಾದವರು ಇತರರಿಗೆ ಸ್ಪೂರ್ತಿದಾಯಕವಾಗಬೇಕು ಎಂದು ತಿಳಿಸಿದರು. ವಿದ್ಯಾರ್ಥಿಯ ಜೀವನದಲ್ಲಿ ಶಿಸ್ತನ್ನು ಕಲಿಯಲು ಮೊದಲು ಕುಟುಂಬ ನಂತರ ಶಾಲೆ ಹಾಗೂ ಸಮಾಜದ ಪಾತ್ರ ಬಹಳ ಮುಖ್ಯವಾಗಿದೆ ಎಂದು ತಿಳಿಸಿದರು.

ಕಾರ್‍ಯಕ್ರಮದಲ್ಲಿ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ, ಅಕಾಡಮಿಕ್ ಡೈರೆಕ್ಟರ್ ದಿವಾಕರ ಶೆಟ್ಟಿ ಹೆಚ್, ಶಾಲಾ ಪ್ರಾಂಶುಪಾಲ ನಿತಿನ್ ಡಿ ಆಲ್ಮೆಡಾ, ಶಿಕ್ಷಕರು ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿನಾಯಕಿಯಾಗಿ ಕೀರ್ತನಾ ಶೆಟ್ಟಿ ಹಾಗೂ ಉಪನಾಯಕಿಯಾಗಿ ಹರ್ಷಿಣಿ ಆಯ್ಕೆಯಾದರು. ವಿದ್ಯಾರ್ಥಿಗಳಾದ ಸ್ನೇಹ ಸ್ವಾಗತಿಸಿದರು, ಹಂಸವಿ ಕಾರ್‍ಯಕ್ರಮ ನಿರೂಪಿಸಿದರು, ದೀಪ್ತಿ ವಂದಿಸಿದರು, ಶಿಕ್ಷಕರಾದ ಪ್ರಜ್ಞಾ ಕಾಮತ್ ಹಾಗೂ ರವೀಂದ್ರ ಕೆ. ರವರು ಕಾರ್‍ಯಕ್ರಮ ಸಂಘಟಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!