spot_img
Tuesday, March 31, 2026
spot_img

ಜೂ. 27 ರಂದು ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ : ದ. ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

ಜನಪ್ರತಿನಿಧಿ (ದಕ್ಷಿಣ ಕನ್ನಡ)  : ದಕ್ಷಿಣ ಕನ್ನಡ ಜಿಲ್ಲೆಯ ಮಳೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಎಲ್ಲಾ ಅಂಗನವಾಡಿ ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಾಳೆ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ (ಗುರುವಾರ, ಜೂ. 27) ರಜೆ ಘೋಷಣೆ ಮಾಡಿದ್ದಾರೆ.

ಸಂಭವ್ಯ ಪ್ರವಾಹ, ಭೂಕುಸಿತ ಪ್ರದೇಶಗಳನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ. ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆಯಿದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧ ಪಟ್ಟ ಪಂಚಾಯತ್ ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡಲು ತಿಳಿಸಿದ್ದಾರೆ.

ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು ಜಿಲ್ಲಾಡಳಿತದ ಸಲಹೆ ಸೂಚನೆಗಳನ್ನು ಪಾಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!