Sunday, September 8, 2024

ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ : ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್‌

ಜನಪ್ರತಿನಿಧಿ (ಬೆಂಗಳೂರು) : ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಾಸನ ಲೋಕಸಭಾ ಕ್ಷೇತ್ರದ​​ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು (ಬುಧವಾರ) ವಜಾಗೊಳಿಸಿದೆ.

ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು, ಆದೇಶವನ್ನು ಕಾಯ್ದಿಸಿದ್ದರು. ಇಂದು ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿರುವುದರಿಂದ ಪ್ರಜ್ವಲ್‌ ರೇವಣ್ಣ ಈಗ ಹೈಕೋರ್ಟ್‌ ಮೊರೆ ಹೋಗಬೇಕಾಗಿರುವುದು ಅನಿವಾರ್ಯವಾಗಿದೆ.

ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ರೇವಣ್ಣ ಅವರನ್ನು ಮೂರನೇ ಪ್ರಕರಣದಲ್ಲಿ ಇಂದು ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಅವರನ್ನು ಹೊಳೆನರಸೀಪುರಕ್ಕೆ ಕರೆದೊಯ್ದು ಅವರ ತಂದೆ, ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ನಿವಾಸದಲ್ಲಿ ಸ್ಥಳ ಮಹಜರು ಮಾಡಿದ್ದಾರೆ.

ಏಪ್ರಿಲ್‌ 28 ರಂದು ಪ್ರಜ್ವಲ್‌ ರೇವಣ್ಣ ವಿರುದ್ದ ಹೊಳೆನರಸೀಪುರದಲ್ಲಿ ಮೊದಲು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಇದಾದ ಬಳಿಕ ಅತ್ಯಾಚಾರ ಎಸಗಿದ ಪ್ರಕರಣವೂ ದಾಖಲಾಗಿದ್ದವು. ಒಂದು ತಿಂಗಳಿಗೂ ಅಧಿಕ ಕಾಲ ವಿದೇಶದಲ್ಲಿಯೇ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ ಆನಂತರ ವಿಶೇಷ ತನಿಖಾ ತಂಡದ ಎದುರು ಶರಣಾಗಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!