spot_img
Wednesday, April 1, 2026
spot_img

ಜಾರ್ಖಂಡ್‌ ಭೂ ಹಗರಣ : ಮಾಜಿ ಸಿಎಂ ಹೇಮಂತ್ ಸೊರೆನ್ ನ್ಯಾಯಾಂಗ ಬಂಧನ ವಿಸ್ತರಣೆ

ಜನಪ್ರತಿನಿಧಿ (ರಾಂಚಿ) : ಜಾರ್ಖಂಡ್‌ ಮಾಜಿ ಸಿಎಂ ಹೇಮಂತ್ ಸೊರೆನ್ ಅವರ ನ್ಯಾಯಾಂಗ ಬಂಧನವನ್ನು ರಾಂಚಿಯ ವಿಶೇಷ ಪಿಎಂಎಲ್‌ಎ ನ್ಯಾಯಾಲಯವು ಹದಿನಾಲ್ಕು ದಿನಗಳವರೆಗೆ ವಿಸ್ತರಣೆ ಮಾಡಿದೆ.

ಜನವರಿ 31 ರಂದು ಭೂ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೊರೆನ್ ಅವರನ್ನು ಇಡಿ ಬಂಧಿಸಿತ್ತು. ಜಾರ್ಖಂಡ್ ಮಾಜಿ ಸಿಎಂ ಪ್ರಸ್ತುತ ರಾಂಚಿಯ ಬಿರ್ಸಾ ಮುಂಡಾ ಸೆಂಟ್ರಲ್ ಜೈಲಿನಲ್ಲಿದ್ದಾರೆ.

ಸೊರೆನ್ ಹಾಗೂ ಇತರ 11 ಆರೋಪಿಗಳನ್ನು ರಾಂಚಿಯ ವಿಶೇಷ ನ್ಯಾಯಾಲಯಕ್ಕೆ  ಇಂದು(ಗುರುವಾರ) ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸುವ ಮೂಲಕ ವಿಚಾರಣೆ ನಡೆಸಿದ ನ್ಯಾಯಾಲಯ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನವನ್ನು ಇನ್ನೂ 14 ದಿನಗಳವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ.

ಹೇಮಂತ್ ಸೊರೆನ್ ಹೊರತುಪಡಿಸಿ, ಅಮಾನತುಗೊಂಡ ಬರ್ಗೈ ವಲಯದ ಕಂದಾಯ ಉಪನಿರೀಕ್ಷಕ ಭಾನು ಪ್ರತಾಪ್, ಜೆಎಂಎಂ ನಾಯಕ ಅಂತು ಟಿರ್ಕಿ, ಎಂಡಿ ಸದ್ದಾಂ, ಎಂಡಿ ಅಫ್ಸರ್ ಅಲಿ, ವಿಪಿನ್ ಸಿಂಗ್, ಪ್ರಿಯರಂಜನ್ ಸಹಾಯ್, ಇರ್ಷಾದ್ ಅಖ್ತರ್, ಶೇಖರ್ ಕುಶ್ವಾಹಾ, ಎಂಡಿ ಇರ್ಷಾದ್, ಕೋಲ್ಕತ್ತಾದ ರಿಜಿಸ್ಟ್ರಾರ್ ಆಫ್ ಅಶ್ಯೂರೆನ್ಸ್‌ನ ಇಬ್ಬರು ಉದ್ಯೋಗಿಗಳಾದ ತಪಸ್ ಘೋಷ್ ಮತ್ತು ಸಂಜಿತ್ ಕುಮಾರ್ ಕೂಡ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!