spot_img
Wednesday, April 1, 2026
spot_img

ನೇಜಾರು ಕೊಲೆ ಪ್ರಕರಣ : ಆರೋಪಿ ಪ್ರವೀಣ್‌ ಚೌಗುಲೆ ಜಾಮೀನು ಅರ್ಜಿ ವಜಾ

ಜನಪ್ರತಿನಿಧಿ (ಬೆಂಗಳೂರು) : ಏರ್ ಹೋಸ್ಟೆಸ್ ಓರ್ವಳನ್ನು ಒಳಗೊಂಡು ನಾಲ್ವರ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

2023ರ ನವೆಂಬರ್ 12ರಂದು ಉಡುಪಿ ಜಿಲ್ಲೆಯ ಮಲ್ಪೆ ಠಾಣೆ ವ್ಯಾಪ್ತಿಗೆ ಒಳಪಡುವ ನೇಜಾರು ಎನ್ನುವಲ್ಲಿ ಪ್ರವೀಣ್ ಅರುಣ್ ಚೌಗುಲೆ ಒಂದೇ ಕುಟುಂಬದ ಐನಾಜ್, ಹಸೀನಾ, ಅಫ್ನಾನ್, ಅಸೀಮ್ ಅವರನ್ನು ಹತ್ಯೆ ನಡೆಸಿ ಪರಾರಿಯಾಗಿದ್ದ.

ಸಾಂದರ್ಭಿಕ ಸಾಕ್ಷಿ, ಸಿಸಿಟಿವಿ ದೃಶ್ಯಾವಳಿ, ಆರೋಪಿಯ ಕೂದಲಿನ ಡಿಎನ್ಎ ಆಧರಿಸಿ ಹೆಚ್ಚುವರಿ ಎಸ್ ಪಿಪಿ ಬಿ.ಎನ್.ಜಗದೀಶ್ ವಾದ ಮಾಡಿದರು. ವಿಚಾರಣೆ ನಡೆಸಿದ ನ್ಯಾ.ಎಂ.ಜಿ.ಉಮಾ ಅವರಿದ್ದ ಹೈಕೋರ್ಟ್ ನ್ಯಾಯಪೀಠ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಕಳೆದ ಫೆಬ್ರವರಿಯಲ್ಲಿ 15 ಸಂಪುಟಗಳ 2,202 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!