Sunday, September 8, 2024

70 ವರ್ಷ ಮೇಲ್ಪಟ್ಟವರಿಗೆ ಆಯುಷ್ಮಾನ್ ಯೋಜನೆಯಡಿ ಉಚಿತ ಚಿಕಿತ್ಸೆ : ದ್ರೌಪದಿ ಮುರ್ಮು

ಜನಪ್ರತಿನಿಧಿ (ನವದೆಹಲಿ) : 70 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ರಾಷ್ಟ್ರಪತಿ ದೌಪದಿ ಮುರ್ಮು ಇಂದು(ಗುರುವಾರ) ಹೇಳಿದ್ದಾರೆ.

ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, ದೇಶದಲ್ಲಿ 25 ಸಾವಿರ ಜನೌಷಧಿ ಕೇಂದ್ರಗಳನ್ನು ತೆರೆಯುವ ಕಾರ್ಯವೂ ತ್ವರಿತ ಗತಿಯಲ್ಲಿ ಸಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಆಯುಷ್ಮಾನ್ ಭಾರತ್ -ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB-PMJAY) ಅಡಿಯಲ್ಲಿ 55 ಕೋಟಿ ಫಲಾನುಭವಿಗಳಿಗೆ ಉಚಿತ ಆರೋಗ್ಯ ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು.

50 ಕೋಟಿ ಜನರನ್ನು ಒಳಗೊಳ್ಳುವ ಯೋಜನೆ ಎಬಿ-ಎನ್‌ಎಚ್‌ಪಿಎಂ ಆಗಿದೆ. ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆ ಇದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎನ್ನುವುದು ಉಲ್ಲೇಖಾರ್ಹ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!