spot_img
Saturday, May 16, 2026
spot_img

ಮುಂದುವರಿದ ಮಳೆ: ನಾಳೆ ದ.ಕ ಜಿಲ್ಲೆ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ | ಉಡುಪಿಯಲ್ಲಿ ರಜೆ ಘೋಷಣೆ ಇಲ್ಲ !

ಜನಪ್ರತಿನಿಧಿ (ಮಂಗಳೂರು) : ಭಾರಿ ಮಳೆಯಾಗುತ್ತಿರುವ ಕಾರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನದಿಗಳು ತುಂಬಿ ಹರಿಯುತ್ತಿದ್ದು ಪ್ರವಾಹದ ಸ್ಥಿತಿ ಸೃಷ್ಟಿಯಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜೂ.28 ರಂದು(ಶುಕ್ರವಾರ) ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ‌ ಘೋಷಣೆ ಮಾಡಿದ್ದಾರೆ

ಮುನ್ನೆಚ್ಚರಿಕಾ ಕ್ರಮವಾಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದರೇ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿಲ್ಲ.

ಉಡುಪಿ ಜಿಲ್ಲೆಯಲ್ಲಿ ರಜೆ ಇಲ್ಲ : ಜಿಲ್ಲಾಧಿಕಾರಿ 

ಉಡುಪಿ ಜಿಲ್ಲೆಯಲ್ಲಿ ಮಳೆಯ ಕಾರಣದಿಂದ ರೆಡ್ ಅಲರ್ಟ್ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿದಿಲ್ಲ.‌ ಶಾಲಾ ಕಾಲೇಜು ತರಗತಿಗಳು ಜೂ.28ರಂದು ಎಂದಿನಂತೆ ನಡೆಯಲಿದೆ. ಯಾವುದೇ ರಜೆ ಘೋಷಣೆ ಮಾಡಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಸ್ಪಷ್ಟನೆ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!