spot_img
Saturday, December 7, 2024
spot_img

NEET ಪರೀಕ್ಷೆ ಅಕ್ರಮದ ಚರ್ಚಗೆ ಪಟ್ಟು ಹಿಡಿದ ಪ್ರತಿಪಕ್ಷ | ಕಲಾಪ ಮುಂದೂಡಿದ ಸ್ಪೀಕರ್‌

ಜನಪ್ರತಿನಿಧಿ (ನವದೆಹಲಿ) :  NEET ಪರೀಕ್ಷೆ ಅಕ್ರಮ ಬಗ್ಗೆ ಚರ್ಚೆಗೆ ಪ್ರತಿಪಕ್ಷಗಳ ಬಿಗಿಪಟ್ಟು ಹಿಡಿದ್ದರಿಂದ ಗದ್ದಲ ಉಂಟಾಗಿ ಲೋಕಸಭೆ ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ, ಬಳಿಕ ಸೋಮವಾರಕ್ಕೆ ಮುಂದೂಡಲಾಯಿತು.

ಮಧ್ಯಾಹ್ನ 12 ಗಂಟೆಗೆ ಕಲಾಪ ಪುನರ್ ಸಮಾವೇಶಗೊಳ್ಳುತ್ತಿದ್ದಂತೆಯೇ NEET ಅಕ್ರಮ ಬಗ್ಗೆ ಚರ್ಚಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟ ಪ್ರತಿಪಕ್ಷಗಳು ಪ್ರತಿಭಟನೆ ಮುಂದುವರೆಸಿದವು.

ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ ಸಲ್ಲಿಸುವ ಸಂದರ್ಭದಲ್ಲಿ ಚರ್ಚಿಸಬಹುದೆಂದು ಸ್ಪೀಕರ್ ಓಂ ಬಿರ್ಲಾ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಪ್ರತಿಪಕ್ಷ ಸದಸ್ಯರಿಗೆ ಹೇಳಿದರು.

ಸ್ಪೀಕರ್ ಮಾತಿಗೆ ಕಿಮ್ಮತ್ತು ನೀಡದ ಕಾಂಗ್ರೆಸ್, ಟಿಎಂಸಿ ಹಾಗೂ ಡಿಎಂಕೆ ಪಕ್ಷಗಳ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

ರಾಷ್ಟ್ರಪತಿಗಳ ಭಾಷಣಕ್ಕೆ ನಿರ್ಣಯ ಸಲ್ಲಿಸುವ ಸಂದರ್ಭದಲ್ಲಿ ಪ್ರತಿಪಕ್ಷಗಳ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಲಾಗುವುದು ಎಂದು ಕಿರಣ್ ರಿಜಿಜು ಹೇಳಿದರು.

ಪ್ರತಿಪಕ್ಷಗಳ ಸದಸ್ಯರು ಘೋಷಣೆ ಕೂಗುತ್ತಾ, ಪ್ರತಿಭಟನೆ ಮುಂದುವರೆಸಿದ್ದರಿಂದ ಸದನದಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾಯಿತು. ಈ ಕಾರಣದಿಂದಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಸೋಮವಾರಕ್ಕೆ ಮುಂದೂಡಿದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!