spot_img
Wednesday, March 11, 2026
spot_img

ಬಿ.ಬಿ. ಹೆಗ್ಡೆ ಕಾಲೇಜು: ಬ್ಯಾಂಕ್ ಬ್ಯಾಟಲ್ 2.0

ಕುಂದಾಪುರ: ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಪ್ರಥಮ ಬಿ.ಕಾಂ. ವಿದ್ಯಾರ್ಥಿಗಳಿಗೆ ನೂತನ ಬ್ಯಾಂಕಿಂಗ್ ಪದ್ಧತಿ ಮತ್ತು ಅನುಸರಿಸಿಕೆಯ ಕುರಿತು ಪ್ರಾಯೋಗಿಕ ಜ್ಞಾನ ನೀಡುವ ನಿಟ್ಟಿನಲ್ಲಿ ‘ಬ್ಯಾಂಕ್ ಬ್ಯಾಟಲ್ 2.0 ಎಂಬ ಅಂತರ್-ತರಗತಿವಾರು ಸ್ಪರ್ಧೆ ನಡೆಯಿತು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೋಟಾ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀ ಶರತ್ ಕುಮಾರ್ ಶೆಟ್ಟಿ ಇವರು ಮಾತನಾಡಿ, ಆಧುನಿಕ ಬ್ಯಾಂಕಿಂಗ್ ಪದ್ಧತಿಯ ಅಳವಡಿಕೆಯಿಂದ ಉದ್ಯೋಗ ಕೇಂದ್ರದ ಮೇಲೆ ಆಗುವ ಪರಿಣಾಮದ ಕುರಿತು ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಗಳಾದ ಸುನೀಲ್ ಎಸ್. ಮೊಗವೀರ, ಗ್ರಾಹಕ ಸೇವಾ ಸಹವರ್ತಿ, ಕೆನರಾ ಬ್ಯಾಂಕ್ ಭಟ್ಕಳ ಇವರು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶ ಗಳಿಸುವಲ್ಲಿ, ವಾಣಿಜ್ಯ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿರಬೇಕು ಎಂದರು ಕಾರ್ಯಕ್ರಮದ ಸಂಯೋಜಕರಾದ ಶರತ್ ಕುಮಾರ್ ಹಾಗೂ ಅಕ್ಷಯ್ ಕುಮಾರ್ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ಭಟ್ ಸ್ವಾಗತಿಸಿ, ವಾಣಿಜ್ಯ ಪ್ರಾಧ್ಯಾಪಕರಾದ ಶ್ರೀಮತಿ ಪ್ರೀತಿ ಹೆಗ್ಡೆ ವಂದಿಸಿ, ಸತೀಶ್ ಶೆಟ್ಟಿ ಹೆಸ್ಕತ್ತೂರು ವಿಜೇತರ ಪಟ್ಟಿ ವಾಚಿಸಿದರು.

ಕೃತಕ ಬ್ಯಾಂಕ್ ನಿರ್ಮಾಣ ಹಾಗೂ ಬ್ಯಾಂಕಿಂಗ್ ವ್ಯವಹಾರ ನಿರ್ವಹಣೆಯ ಅರಿವಿನ ಕುರಿತು ಆಯೋಜಿಸಿದ ಬ್ಯಾಂಕ್ ಬ್ಯಾಟಲ್ ೨.೦ ಇದರ ಸಮಗ್ರ ವಿಜೇತ ಪ್ರಶಸ್ತಿ ಪ್ರಥಮ ಬಿ.ಕಾಂ. ‘ಸಿ’ ಗಳಿಸಿದರೆ ದ್ವಿತೀಯ ಬಹುಮಾನ ಪ್ರಥಮ ಬಿ.ಕಾಂ. ‘ಬಿ’ ಪಡೆದುಕೊಂಡರು.
ವಿದ್ಯಾರ್ಥಿಗಳಾದ ಶ್ರೇಯಾ ಖಾರ್ವಿ ಪ್ರಾರ್ಥಿಸಿ, ಪ್ರಿಯಾಂಕಾ ಅತಿಥಿಗಳನ್ನು ಪರಿಚಯಿಸಿ, ಸೌಭಾಗ್ಯ ಕಿಣಿ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!