spot_img
Wednesday, March 11, 2026
spot_img

‘ಬುದ್ಧಿಯ ಜೊತೆಗೆ ಬೆರಳುಗಳ ಮೇಲೆ ಹತೋಟಿ ಅಗತ್ಯ’-ಟಿ.ವಿ. ದೇವರಾಜ್

ಕುಂದಾಪುರ : ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಸೈಬರ್ ಸೆಕ್ಯೂರಿಟಿಯ ಕುರಿತು ಅರಿವು ಕಾರ್ಯಕ್ರಮ ನಡೆಯಿತು.

ರಾಷ್ಟ್ರೀಯ ಶಿಕ್ಷಣ ನೀತಿ ವಿಷಯಾಧರಿತ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸೈಬರ್ ಕ್ರೈಮ್ ಡಿಪಾರ್ಟ್ಮೆಂಟ್, ಮಣಿಪಾಲ ಇಲ್ಲಿನ ಅಡಿಷನಲ್ ಎಸ್.ಐ ಟಿ.ವಿ. ದೇವರಾಜ್ ವಿವಿಧ ರೀತಿಯ ಸೈಬರ್ ಅಪರಾಧವನ್ನು ತಡೆಗಟ್ಟುವುದು ಮತ್ತು ಅದರಿಂದ ತಪ್ಪಿಸಿಕೊಳ್ಳುವ ರೀತಿಯ ಬಗ್ಗೆ ಮಾತನಾಡುತ್ತಾ, ಹದಿಹರೆಯದ ವಿದ್ಯಾರ್ಥಿಗಳು ತಮ್ಮ ಬುದ್ಧಿಯ ಜೊತೆಗೆ ಬೆರಳುಗಳ ಮೇಲೆ ಕೂಡ ನಿಯಂತ್ರಣ ಪಡೆದುಕೊಳ್ಳುವ ಅಗತ್ಯ ಇದೆ ಎಂದರು.

ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿದ್ದು, ಮೊಬೈಲ್ ಬಳಕೆ ಹಾಗೂ ಸಾಮಾಜಿಕ ಜಾಲಾತಾಣಗಳಲ್ಲಿ ತೊಡಗಿಸಿಕೊಳ್ಳುವಾಗ ವಿದ್ಯಾರ್ಥಿಗಳು ಪ್ರಜ್ಞಾವಂತಿಕೆ ಮರೆಯಬಾರದು ಎಂದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ಭಟ್ ಪ್ರಾಸ್ತಾವಿಸಿದರು. ಕಾರ್ಯಕ್ರಮದ ಸಂಯೋಜಕರಾದ ಶ್ರೀಮತಿ ಜೋಸ್ಲಿನ್ ಅಲ್ಮೇಡಾ ಮತ್ತು ಪೂಜಾ ಕುಂದರ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಶ್ರೀನಾಭ ಸ್ವಾಗತಿಸಿ, ನೇಹಾ ಅತಿಥಿಗಳನ್ನು ಪರಿಚಯಿಸಿ, ಸಿಂಚನಾ ವಂದಿಸಿ, ಚಂದನಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಸುಹಾನಿ ಕಾರ್ಯಕ್ರಮದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!