spot_img
Wednesday, April 1, 2026
spot_img

ಪೋಕ್ಸೋ : ಬಿಎಸ್‌ವೈ ಮಧ್ಯಂತರ ಜಾಮೀನು ಅವಧಿ ವಿಸ್ತರಿಸಿ ಹೈಕೋರ್ಟ್‌ ಆದೇಶ

ಜನಪ್ರತಿನಿಧಿ (ಬೆಂಗಳೂರು) : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮಧ್ಯಂತರ ಜಾಮೀನು ಅವಧಿಯನ್ನು ಹೈಕೋರ್ಟ್ ಇಂದು(ಶುಕ್ರವಾರ) ವಿಸ್ತರಣೆ ಮಾಡಿದೆ.

ಯಡಿಯೂರಪ್ಪ ಅವರ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ(ಪೋಕ್ಸೋ) ಅಡಿ ಕೇಸ್ ದಾಖಲಿಸಲಾಗಿದೆ. ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಸಿಐಡಿ ಎಸ್​ಪಿಪಿಗೆ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಎರಡು ವಾರ ಮುಂದೂಡಿದೆ. ಅಲ್ಲದೆ ಆರೋಪಿಯ ಮಧ್ಯಂತರ ಜಾಮೀನು ಅವಧಿ ವಿಸ್ತರಿಸಿ ಆದೇಶಿಸಿದೆ.

ಸಿಐಡಿ ಪೊಲೀಸರು ಈ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ನ್ಯಾಯಾಲಕ್ಕೆ ಚಾರ್ಜ್​ಶೀಟ್ ಸಲ್ಲಿಸಿದ್ದರು.

ತನ್ನ ಮಗಳ ಮೇಲೆ ಬಿಎಸ್‌ವೈ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ಅಪ್ರಾಪ್ತೆಯ ತಾಯಿ ಸದಾಶಿವನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೊಲೀಸರು ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ಈ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿತ್ತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!