Sunday, September 8, 2024

ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಅಗತ್ಯ-ಬಸವರಾಜ ಕನಶೆಟ್ಟಿ

ಗಂಗೊಳ್ಳಿ : ಈಗಿನ ಯುವ ಜನತೆಗೆ ಮಾದಕ ದ್ರವ್ಯಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗೆಗೆ ಸಮಗ್ರ ಅರಿವು ಇರಬೇಕು. ಸಮಾಜದಲ್ಲಿ ಈ ವಿಚಾರದ ಬಗ್ಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳಲ್ಲಿ ತಮ್ಮನ್ನು ಸ್ವಯಂ ಪ್ರೇರಿತರಾಗಿ ತೊಡಗಿಸಿಕೊಳ್ಳಬೇಕು ಎಂದು ಗಂಗೊಳ್ಳಿಯ ಆರಕ್ಷಕ ಠಾಣೆಯ ಕ್ರೈಂ ಪಿ‌ಎಸ್‌ಐ ಬಸವರಾಜ ಕನಶೆಟ್ಟಿ ಹೇಳಿದರು.

ಉಡುಪಿ ಜಿಲ್ಲಾ ಪೊಲೀಸ್ ಕುಂದಾಪುರ ಉಪ ವಿಭಾಗ ಗಂಗೊಳ್ಳಿ ಆರಕ್ಷಕ ಠಾಣೆ ಮತ್ತು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಸ್ವಾಗತಿಸಿದರು. ವಿದ್ಯಾರ್ಥಿನಿ ಟ್ರೆನಿಟಾ ರೆಬೆಲ್ಲೋ ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್ ಕೆ ವಂದಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!