spot_img
Tuesday, March 31, 2026
spot_img

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರು: ಆಂಗ್ಲ ಮಾಧ್ಯಮ ತರಗತಿಯ ಉದ್ಘಾಟನೆ

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರು ಇಲ್ಲಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಅನುಮೋದನೆಗೊಂಡ ಒಂದನೆಯ ತರಗತಿಯಿಂದ ಆಂಗ್ಲ ಮಾಧ್ಯಮ ತರಗತಿಯ ಉದ್ಘಾಟನೆಯನ್ನು ಎಂ ಎಸ್ ಮಂಜ ಚಾರಿಟೇಬಲ್ ಟ್ರಸ್ಟ್ ಮಾರಣಕಟ್ಟೆ, ಚಿತ್ತೂರು ಇದರ ಅಧ್ಯಕ್ಷರಾದ ಕೃಷ್ಣಮೂರ್ತಿ ಮಂಜರು ನೇರವೇರಿಸಿದರು.

ನಂತರ ಎಂ ಎಸ್ ಮಂಜ ಚಾರಿಟೇಬಲ್ ಟ್ರಸ್ಟ್ ಮಾರಣಕಟ್ಟೆ, ಚಿತ್ತೂರು ಇದರ ವತಿಯಿಂದ ಪ್ರತಿವರ್ಷ ಕೊಡಮಾಡುವ ಉಚಿತ ನೋಟ್ಸ್ ಪುಸ್ತಕ, ಸಮವಸ್ತ್ರ, ಐಡಿ ಕಾರ್ಡ್ ಮತ್ತು ಬೆಲ್ಟ್ ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಜೊತೆಗೆ ರಾಷ್ಟ್ರ ಮಟ್ಟದ ಕ್ರೀಡಾಪಟುವಾದ ಕುಮಾರ ನಿತೇಶ್ ಹಾಗೂ ಕರ್ನಾಟಕ ರಾಜ್ಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸುರೇಂದ್ರ ಆಲೂರು ಇವರನ್ನು ಸನ್ಮಾನಿಸಲಾಯಿತು.

ಅಲ್ಲದೇ ಮಕ್ಕಳನ್ನು ಸಾಂಸ್ಕೃತಿಕವಾಗಿ ಸಕ್ರಿಯವಾಗಿ ತೊಡಗಿಸುವ ನಿಟ್ಟಿನಲ್ಲಿ ನೂತನವಾಗಿ ಆರಂಭಗೊಳ್ಳಲಿರುವ “ಚಿಗುರು” ಎಂಬ ಸಾಂಸ್ಕೃತಿಕ ಸಂಘದ ಬ್ಯಾನರ್ ಅನ್ನು ಬೈಂದೂರು ತಾಲೂಕು ದೈಹಿಕ ಶಿಕ್ಷಣ ಪರೀವೀಕ್ಷಣಾಧಿಕಾರಿಗಳಾಗಿರುವ ಚಂದ್ರಶೇಖರ್ ಶೆಟ್ಟಿ ಮತ್ತು ಯಕ್ಷಗಾನ ಗುರುಗಳು ಆದ ಸುರೇಂದ್ರ ಆಲೂರು ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿರುವ ರಾಜೇಶ್ ಎನ್ ದೇವಾಡಿಗ ಇವರು ವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ನ ಮಾಜಿ ಸದಸ್ಯರಾದ ಮಂಜಯ್ಯ ಶೆಟ್ಟಿ, ಆಲೂರು ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಸಿಂಗಾರಿ, ಸದಸ್ಯರಾಗಿರುವ ರವಿ ಶೆಟ್ಟಿ, ಪ್ರಸನ್ನ ಕುಮಾರ್ ಶೆಟ್ಟಿ, ಜಯಲಕ್ಷ್ಮೀ ಗಾಣಿಗ, ದಾನಿಗಳು ಹಾಗೂ ಕಾಳಿಕಾಂಬ ದೇವಸ್ಥಾನ ಉಪ್ರಳ್ಳಿ ಇದರ ಆಡಳಿತ ಮೊಕ್ತೇಸರರಾದ ಚಂದ್ರಯ್ಯ ಆಚಾರ್ ಕಳಿ, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ದತ್ತಾತ್ರೇಯ ಭಟ್, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ನಾರಾಯಣ ಶೆಟ್ಟಿ, ಪ್ರಾಥಮಿಕ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಶಶಿಧರ ಶೆಟ್ಟಿ,  ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಆಗಿರುವ ಲೀನಾ ಕಾರ್ಡಿನ, ಎಸ್. ಡಿ. ಎಂ. ಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

ಸಹಶಿಕ್ಷಕರಾದ ದಿನಕರ ದೇವಾಡಿಗ ಸ್ವಾಗತಿಸಿ, ನಾಗರತ್ನ ಜಿ ನಿರೂಪಿಸಿ, ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಲೀನಾ ಕಾರ್ಡಿನ ವಂದಿಸಿ, ವೀರೇಂದ್ರ ಜೋಗಿ ಪ್ರಾಸ್ತಾವಿಕ ಮಾತನಾಡಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!