spot_img
Tuesday, March 31, 2026
spot_img

ಹೆಸಕುತ್ತೂರು ಪ್ರಾಥಮಿಕ ಶಾಲೆ : ಅಬಾಕಸ್ ತರಗತಿ ಉದ್ಘಾಟನೆ

KUNDAPURA: “ಗ್ರಾಮೀಣ ಪ್ತದೇಶದ ವಿದ್ಯಾರ್ಥಿಗಳು ವಿವಿಧ ಆಯಾಮಗಳಲ್ಲಿ ವಿಕಾಸಗೊಳ್ಳಲು ವೈವಿಧ್ಯಮಯ ಅವಕಾಶ ಒದಗಿಸುತ್ತಿರುವ ಹೆಸಕುತ್ತೂರು ಪ್ರಾಥಮಿಕ ಶಾಲೆಯ ಪ್ರಯತ್ನ ಅಭಿನಂದನೀಯ” ಎಂದು ನಿವೃತ್ತ ಮುಖ್ಯ ಶಿಕ್ಷಕರಾದ  ಸುಬ್ಬಣ್ಣ ಶೆಟ್ಟಿ ಹುಣಸೆಮಕ್ಕಿ ನುಡಿದರು.
ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸಕುತ್ತೂರು ಇಲ್ಲಿ ನೂತನವಾಗಿ ಆರಂಭಿಸಲಾದ ಅಬಾಕಸ್ ತರಗತಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ  ಕ್ರಷ್ಣ ಕೆದ್ಲಾಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ರಾಪಿಡ್ ಇನ್ಸ್ಟಿಟ್ಯೂಟ್ ಓಫ್ ಅಬಾಕಸ್ ನ ಪ್ರಿನ್ಸಿಪಾಲರಾದ ಸುನೀತಾ ಹೆಬ್ಬಾರ್ ಅಬಾಕಸ್ ತರಗತಿಯ ಸ್ವರೂಪದ ಕುರಿತು ಮಾತನಾಡಿದರು. ಶಾಲಾ ಸಹ ಶಿಕ್ಷಕರಾದ ಸಂಜೀವ ಎಂ, ವಿಜಯಾ ಆರ್, ವಿಜಯ ಶೆಟ್ಟಿ, ರವೀಂದ್ರ ನಾಯಕ್, ಸ್ವಾತಿ ಬಿ, ಗೌರವ ಶಿಕ್ಷಕಿ ಮಧುರ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ್ ಸ್ವಾಗತಿಸಿದರು. ಜಯಲಕ್ಷ್ಮಿ ಬಿ ವಂದಿಸಿದರು. ಅಶೋಕ ತೆಕ್ಕಟ್ಟೆ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!