Sunday, September 8, 2024

ನೀಟ್ ಪರೀಕ್ಷೆ ಅಕ್ರಮ: ಸ್ಪರ್ಧಾತ್ಮಕ ಪರೀಕ್ಷೆಯನ್ನು ಸಮರ್ಥವಾಗಿ ನಿರ್ವಹಿಸಲಾಗದ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಎನ್.ಎಸ್.ಯು.ಐ ಒತ್ತಾಯ

ಕುಂದಾಪುರ: ನೀಟ್ ಪರೀಕ್ಷೆಯಲ್ಲಿನ ಅವ್ಯವಹಾರ ಖಂಡಿಸಿ ಎನ್.ಎಸ್.ಯು.ಐ ನೇತೃತ್ವದಲ್ಲಿ ಪ್ರತಿಭಟನೆ

ಕುಂದಾಪುರ, ಜು.1: ನೀಟ್ ಪರೀಕ್ಷೆಯಲ್ಲಿನ ಅವ್ಯವಹಾರದಿಂದಾಗಿ ಈ ಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಈ ಬಾರಿಯ ನೀಟ್ ಪರೀಕ್ಷೆಯಲ್ಲಿ 720ಅಂಕಕ್ಕೆ 720 ಅಂಕವನ್ನು 67 ವಿದ್ಯಾರ್ಥಿಗಳು ಪಡೆದಿರುವುದು ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಸ್ಪಷ್ಟ. ಉತ್ತರ ಭಾರತದವರೇ ಅವಕಾಶ ಪಡೆದಿದ್ದು ಇದರಿಂದ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡಿದಂತಾಗಿದೆ. ಇಂಥಹ ಸ್ಪರ್ಧಾತ್ಮಕ ಪರೀಕ್ಷೆಯನ್ನು ಸಮರ್ಥವಾಗಿ ನಿರ್ವಹಿಸಲಾಗದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಎನ್.ಎಸ್.ಯು.ಐ ಜಿಲ್ಲಾ ಅಧ್ಯಕ್ಷರ ಸೌರಭ್ ಬಲ್ಲಾಳ್ ಹೇಳಿದರು.

ಕುಂದಾಪುರ ಬ್ಲಾಕ್ ಕಾಂಗ್ರೆಸ್, ಎನ್.ಎಸ್.ಯು.ಐ ಕುಂದಾಪುರ ವಿಧಾನಸಭಾ ಕ್ಷೇತ್ರ ಇವರ ಜಂಟಿ ಆಶ್ರಯದಲ್ಲಿ ನೀಟ್ ಪರೀಕ್ಷೆಯಲ್ಲಿನ ಅವ್ಯವಹಾರ ಖಂಡಿಸಿ ಕುಂದಾಪುರ ಶಾಸ್ತ್ರೀವೃತ್ತದಲ್ಲಿ ನಡೆದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆ ಎಲ್ಲರಿಗೂ ಸ್ಷಷ್ಟವಾಗಿದ್ದರೂ ಕೂಡಾ ಈ ಭಾಗದ ಯಾವುದೇ ಬಿಜೆಪಿ ಸಂಸದರಾಗಲಿ, ಶಾಸಕರಾಗಲಿ ಮಾತನಾಡುತ್ತಿಲ್ಲ. ವಿದ್ಯಾರ್ಥಿಗಳಿಗೆ ಆದ ಅನ್ಯಾಯದ ಬಗ್ಗೆ ಧ್ವನಿಯೆತ್ತುತ್ತಿಲ್ಲ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರು ಈ ಬಗ್ಗೆ ಧ್ವನಿ ಎತ್ತಬೇಕಾಗಿದೆ. ಈ ಬಗ್ಗೆ ಅವರು ಮೌನ ವಹಿಸಿದರೆ ಅವರ ಮನೆ ಮುಂದೆಯೇ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.

ಈ ಅನ್ಯಾಯ ನಮ್ಮ ಜಿಲ್ಲೆ ಗಂಭೀರವಾಗಿ ಪರಿಗಣಿಸಬೇಕಾಗಿದೆ. ನಮ್ಮ ಜಿಲ್ಲೆಯಲ್ಲಿ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳಿದ್ದರೂ ಕೂಡಾ ನಮ್ಮವರಿಗೆ ಅವಕಾಶ ಇಲ್ಲದಂತಾಗಿದೆ. ಉತ್ತರ ಭಾರತದವರು ಸುಲಭವಾಗಿ ಅವಕಾಶ ಪಡೆಯುತ್ತಾರೆ. ಕಷ್ಟಪಟ್ಟು ಓದಿದವರು ನಿರಾಸರಾಗಬೇಕಾಗುತ್ತದೆ. ಪ್ರಶ್ನೆ ಪತ್ರಿಕೆಯ ಸೋರಿಕೆ ಪ್ರಯೋಜನ ಪಡೆದು ಡಾಕ್ಟರ್‌ಗಳಾಗಿ ಯಾವ ರೀತಿ ಬರುತ್ತಾರೆ ಈ ಬಗ್ಗೆ ಯೋಚನೆ ಮಾಡಬೇಕಾಗಿದೆ. ರಾಷ್ಟ್ರಮಟ್ಟದಲ್ಲಿ ನಡೆಯುವ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆಯೂ ಆತಂಕ ಎದುರಾಗಿದೆ ಎಂದರು.

ಪ್ರತಿಭಟನೆಯ ನೇತೃತ್ವ ವಹಿಸಿದ ಕಾಂಗ್ರೆಸ್ ಮುಖಂಡರಾದ ದಿನೇಶ ಹೆಗ್ಡೆ ಮೊಳಹಳ್ಳಿ ಮಾತನಾಡಿ, 24 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆದಿದ್ದು ಹರಿಯಾಣದಲ್ಲಿ ನಡೆದ ಅಕ್ರಮ ದೇಶದ್ಯಂತ ಪಸರಿಸಿದೆ. ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡಲಾಗಿದೆ. ವೈದ್ಯಕೀಯ ಪರೀಕ್ಷೆಗಾಗಿ ವಿದ್ಯಾರ್ಥಿಗಳು ವರ್ಷಾನುಗಟ್ಟಲೆ ತಯಾರಿ ಮಾಡುತ್ತಾರೆ. ಪರೀಕ್ಷಾ ಅಕ್ರಮದ ಬಗ್ಗೆ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಅವರು,2014ರಿಂದ ನೀಟ್ ಪರೀಕ್ಷೆಯಲ್ಲಿ ಒಬ್ಬರೋ ಇಬ್ಬರೋ 720 ಅಂಕ ಪಡೆಯುತ್ತಿದ್ದರು. ಆದರೆ ಈ ಬಾರಿ ಹರಿಯಾಣ ಒಂದೇ ಕಡೆ 17 ವಿದ್ಯಾರ್ಥಿಗಳು 720 ಅಂಕ ಪಡೆದಿದ್ದಾರೆ. ಒಟ್ಟು 67 ವಿದ್ಯಾರ್ಥಿಗಳು 720 ಅಂಕ ಪಡೆದಿದ್ದಾರೆ ಎಂದರೆ ಎಷ್ಟರ ಮಟ್ಟಿಗೆ ಇಲ್ಲಿ ಅಕ್ರಮ ನಡೆದಿದೆ ಎನ್ನುವುದು ಸ್ಪಷ್ಟ. ಇಂಥಹ ಅನ್ಯಾಯವನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ. ಪ್ರಾಮಾಣಿಕವಾಗಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳಿಗೆ ನ್ಯಾಯ ಸಿಗಲೇಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ಮಾತನಾಡಿದರು.

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಜಿಲ್ಲಾ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ, ಎನ್.ಎಸ್.ಯು.ಐ ಕುಂದಾಪುರ ತಾಲೂಕು ಅಧ್ಯಕ್ಷ ಸುಜನ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೇವಕಿ ಸಣ್ಣಯ್ಯ,ಪುರಸಭಾ ಸದಸ್ಯರಾದ ಚಂದ್ರಶೇಖರ ಖಾರ್ವಿ, ಪ್ರಭಾವತಿ ಶೆಟ್ಟಿ, ಶ್ರೀಧರ ಶೇರೆಗಾರ್, ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷ ರೋಶನ್ ಶೆಟ್ಟಿ, ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಪಕ್ಷದ ಪ್ರಮುಖರಾದ ಅಶೋಕ ಪೂಜಾರಿ, ಆಶಾ ಕರ್ವಾಲ್ಲೋ, ಕೋಣಿ ಪಂಚಾಯತ್ ಉಪಾಧ್ಯಕ್ಷೆ ಸೌಮ್ಯ ಮೊಗವೀರ, ಚಂದ್ರ ಅಮೀನ್, ಮುನಾಫ್ ಕೋಡಿ, ನಾರಾಯಣ ಆಚಾರ್, ಕುಮಾರ ಖಾರ್ವಿ, ಅಭಿಜಿತ್ ಪೂಜಾರಿ,ಗಣೇಶ ಶೇರೆಗಾರ್, ಅಶೋಕ ಸುವರ್ಣ, ಜ್ಯೋತಿ ನಾಯ್ಕ, ವಿದ್ಯಾಧರ ಪೂಜಾರಿ, ಸುನೀಲ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಎನ್.ಎಸ್.ಯು.ಐ ನ ಪುರ್ಖಾನ್ ಯಾಸೀನ್, ಅನೀಶ್ ಪೂಜಾರಿ, ಸ್ವಸ್ತಿಕ್ ಶೆಟ್ಟಿ, ವಿವೇಕ್, ಕಾನಿಷ್ಕ ಹೆಗ್ಡೆ, ಸ್ಕಂದ, ಚಂದ್ರಕಾಂತ್, ಸಂಜಯ್ ಶೇರೆಗಾರ್, ರೋಹನ್ ಪೂಜಾರಿ, ವಿಶ್ವಾಸ್, ಸಮ್ಮಿ ಮಹಮ್ಮದ್, ಭಾರ್ಗವ್, ಸಂಪತ್ ಜಿ. ಶೆಟ್ಟಿ,, ಸೌರಭ್ ಶೆಟ್ಟಿ ಹಾಜರಿದ್ದರು.

ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೊ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಳಿಕ ಸಾಂಕೇತಿಕ ರಸ್ತೆ ತಡೆ ನಡೆಸಲಾಯಿತು.

 

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!