Sunday, September 8, 2024

ಸುಳ್ಳು ಸುದ್ದಿಗಳು ಸಮಾಜಕ್ಕೆ ಅಪಾಯಕಾರಿ : ಪತ್ರಿಕಾ ದಿನಚರಣೆಯಲ್ಲಿ ಸಿಎಂ ಅಭಿಪ್ರಾಯ

ಜನಪ್ರತಿನಿಧಿ (ಬೆಂಗಳೂರು) : ಇಡೀ ಸಮಾಜ ಸುಳ್ಳು ಸುದ್ದಿಗಳಿಂದ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ ಮತ್ತು ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಂಟಿಯಾಗಿ ಆಯೋಜಿಸಿದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪತ್ರಿಕಾ ಮತ್ತು ಮಾಧ್ಯಮ ಸಂಘಟನೆಗಳು ಸುಳ್ಳು ಸುದ್ದಿಗಳ ಬಗ್ಗೆ ಗಂಭೀರವಾಗಿ ಯೋಚಿಸಬೇಕು. ಸಾಮಾಜಿಕ‌ ಜಾಲತಾಣಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅಪಾಯಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು, ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಹೇಳಿದರು.

ಇನ್ನು, ಸುಳ್ಳು ಸುದ್ದಿಗಳ ಪತ್ತೆಗೆ, ನಿಯಂತ್ರಣಕ್ಕೆ, ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ ಫ್ಯಾಕ್ಟ್ ಚೆಕ್ ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ. ಈ ನಿಟ್ಟಿನಲ್ಲಿ ಮಾಧ್ಯಮಗಳು ಸತ್ಯಸಂಗತಿ ಜನರಿಗೆ ತಿಳಿಸಿ, ಸುಳ್ಳುಸುದ್ದಿಗೆ ಜನರು ಬಲಿಯಾಗದಂತೆ ತಡೆಯಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!