Wednesday, September 11, 2024

ಕುಂದಾಪುರ-ಗಂಗೊಳ್ಳಿ ಸೇತುವೆ ಸೇರಿದಂತೆ ಹಲವು ಅಗತ್ಯ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಸಚಿವ ಗಡ್ಕರಿಯವರಿಗೆ ಸಂಸದ ಬಿ.ವೈ.ರಾಘವೇಂದ್ರ ಮನವಿ

ದೆಹಲಿ: ಶಿವಮೊಗ್ಗ ಲೋಕಸಭಾ ಸದಸ್ಯರಾದ ಬಿ. ವೈ. ರಾಘವೇಂದ್ರ ಅವರು ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವರಾದ ನಿತಿನ್ ಜೈರಾಂ ಗಡ್ಕರಿಯವರನ್ನು ಜು.1 ರಂದು ಅವರ ಗೃಹ ಕಛೇರಿಯಲ್ಲಿ ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಅಭಿವೃದ್ಧಿಯಾಗಬೇಕಾದ ಹೆದ್ದಾರಿ ಕಾಮಗಾರಿಗಳ ಅಗತ್ಯತೆಗಳ ಬಗ್ಗೆ ಚರ್ಚಿಸಿ ಈ ಕೆಳಕಂಡ ಯೋಜನೆಗಳಿಗೆ ಅನುಮೋದನೆ ದೊರಕಿಸಿಕೊಡಲು ಮನವಿ ಮಾಡಿದ್ದಾರೆ.

ಆಗುಂಬೆ ಘಾಟಿ ರಸ್ತೆಗೆ ಪರ್ಯಾಯವಾಗಿ ಮೇಗರವಳ್ಳಿಯಿಂದ ಸೋಮೇಶ್ವರದವರೆಗೆ 4 ಪಥದ ಸುರಂಗ ಮಾರ್ಗದ ರಸ್ತೆ ನಿರ್ಮಾಣ, ಕುಂದಾಪರದಿಂದ ಗಂಗೊಳ್ಳಿ ಬಂದರಿನವರೆಗೆ 5.60 ಕಿ.ಮೀ ಉದ್ದದ ರಸ್ತೆ ಹಾಗು ಭಾರಿ ಸೇತುವೆ ನಿರ್ಮಾಣ, ರಾ. ಹೆದ್ದಾರಿ 766 ಸಿ ಬೈಂದೂರಿನಿಂದ ವಿವಿಧೋದ್ದೇಶ ಬಂದರಿನವರೆಗೆ ತಾರಾಪತಿ ಅಳವೆಕೋಡಿ ಮೂಲಕ ವಿಸ್ತರಣೆ ಮಾಡಿ 3.80 ಕಿ.ಮೀ ಉದ್ದದ ರಸ್ತೆ ಹಾಗು ಸೇತುವೆಗಳ ನಿರ್ಮಾಣ, ರಾ. ಹೆದ್ದಾರಿ 766 ಸಿ ಬೈಂದೂರಿನಿಂದ ರಾಣಿಬೆನ್ನೂರಿನವರೆಗೆ ಬಾಕಿ ಉಳಿದ ಭಾಗಗಳಲ್ಲಿ ದ್ವಿಪಥ ರಸ್ತೆ ನಿರ್ಮಾಣ, ರಾ. ಹೆದ್ದಾರಿ 369 ಇ ಸಾಗರದಿಂದ ಮರಕುಟಕವರೆಗೆ ದ್ವಿಪಥ ರಸ್ತೆ (ಸಾಗರ ಪಟ್ಟಣದ ಬೈಪಾಸ್ ರಸ್ತೆ ಸೇರಿ) ನಿರ್ಮಾಣಕ್ಕೆ ಮನವಿ ಮಾಡಿದರು.

ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಸಂಬಂದಿಸಿದ ಕೇಂದ್ರ ಭೂಸಾರಿಗೆ ಮಂತ್ರಾಲಯದ ಅಧಿಕಾರಿಗಳಿಗೆ ಸದರಿ ಕಾಮಗಾರಿಗಳ ಯೋಜನಾವರದಿ ತಯಾರಿಸಲು ಸಮಾಲೋಚಕರನ್ನು ತಕ್ಷಣ ನಿಯೋಜಿಸಲು ಸೂಚಿಸಿದ್ದು ಯೋಜನಾ ವರದಿ ಪಡೆದು ಮಂಜೂರಾತಿ ನೀಡಲು ಸಹ ಕ್ರಮವಹಿಸಲು ಸೂಚಿಸಿದರು ಎಂದು ಸಂಸದರ ಕಛೇರಿಯ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!