spot_img
Saturday, March 21, 2026
spot_img

ಅಂಗನವಾಡಿಯಲ್ಲೇ ಎಲ್‌ಕೆಜಿ : ಅನುದಾನಕ್ಕಾಗಿ ಲಕ್ಷ್ಮೀ ಹೆಬ್ಬಾಳ್ಕರ್‌ ಕೇಂದ್ರಕ್ಕೆ ಮೊರೆ

ಜನಪ್ರತಿನಿಧಿ (ಬೆಂಗಳೂರು/ ನವ ದೆಹಲಿ) :  ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಅನ್ನಪೂರ್ಣ ದೇವಿ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಇಲಾಖೆಯ ಬಲವರ್ಧನೆಗೆ ಸಂಬಂಧಿಸಿದಂತೆ ಪ್ರಸ್ತಾವನೆಗಳನ್ನು ಸಲ್ಲಿಸಿದ್ದಾರೆ.

ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ(ಎಲ್‌ ಕೆಜಿ) ನೀಡಲು ಅಗತ್ಯವಿರುವ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಸಚಿವರಲ್ಲಿ ಮನವಿ ಮಾಡಿದ್ದಲ್ಲದೇ, ಕೇಂದ್ರ ಸಹಭಾಗಿತ್ವದ ವಿವಿಧ ಯೋಜನೆಗಳ ಜಾರಿಗೆ ರಾಜ್ಯಕ್ಕೆ ಬಾಕಿ ಇರುವ ಅನುದಾನವನ್ನು ಶೀಘ್ರ ಬಿಡುಗಡೆಗೊಳಿಸುವಂತೆ ಒತ್ತಾಯಿಸಿದ್ದಾರೆ.

ಅಂಗನವಾಡಿ ಕೇಂದ್ರಗಳಿಗೆ ಅಗತ್ಯವಿರುವ ಅಕ್ಕಿ, ಗೋಧಿಯನ್ನು ಕೂಡಲೇ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.

ಇನ್ನು, ಅಂಗನವಾಡಿಗಳಲ್ಲಿ ಕುಡಿಯುವ ನೀರು, ವಿದ್ಯುತ್‌ ಸೌಕರ್ಯ ಸೇರಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಅನುದಾನದ ಅಗತ್ಯವಿದೆ. ತುರ್ತಾಗಿ ಅನುದಾನ ಬಿಡುಗಡೆ ಮಾಡಬೇಕು. ಮುಖ್ಯವಾಗಿ ರಾಜ್ಯದಲ್ಲಿ ಹೊಸದಾಗಿ ಸೃಜಿಸಿರುವ ತಾಲೂಕುಗಳಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಹಾಗೂ ವಿವಿಧ ಸೌಲಭ್ಯಗಳನ್ನು ಶೀಗ್ರವೇ ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!