spot_img
Saturday, February 14, 2026
spot_img

ಇನ್ನು ಮುಂದೆ ತುಷ್ಟೀಕರಣ ನಡೆಯುವುದಿಲ್ಲ : ಮೋದಿ | ‘ಸರ್ವಾಧಿಕಾರವನ್ನು ಸಹಿಸುವುದಿಲ್ಲ’ : ಪ್ರತಿಪಕ್ಷಗಳ ತಿರುಗೇಟು

ಜನಪ್ರತಿನಿಧಿ (ನವದೆಹಲಿ) : ವಿಶ್ವದ ಅತಿದೊಡ್ಡ ಚುನಾವಣೆಯಲ್ಲಿ ಜನ ನಮ್ಮನ್ನು ಆಯ್ಕೆ ಮಾಡಿದ್ದಾರೆ. ಕೆಲವರ ನೋವು ನನಗೆ ಅರ್ಥವಾಗುತ್ತದೆ. ನಿರಂತರವಾಗಿ ಸುಳ್ಳುಗಳನ್ನು ಹಬ್ಬಿಸಿದರೂ, ಅವರು ಸೋಲು ಅನುಭವಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳ ವಿರುದ್ಧ ಪರೋಕ್ಷವಾಗಿ ವಾಗ್ಬಾಣ ಬಿಟ್ಟಿದ್ದಾರೆ.

ಇಂದು(ಮಂಗಳವಾರ) ಲೋಕಸಭೆಯ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಮೋದಿ, ನಿನ್ನೆ ಮತ್ತು ಇಂದು, ಹಲವಾರು ಸಂಸದರು ರಾಷ್ಟ್ರಪತಿಗಳ ಭಾಷಣದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾದವರು ಸಂಸತ್ತಿನ ಎಲ್ಲಾ ನಿಯಮಗಳನ್ನು ಅನುಸರಿಸಿದರು ಮತ್ತು ಅವರ ನಡವಳಿಕೆಯು ಅನುಭವಿ ಸಂಸದರಂತೆಯೇ ಇತ್ತು. ಮೊದಲ ಬಾರಿಗೆ ಅವರು ಸದನದ ಘನತೆಯನ್ನು ಹೆಚ್ಚಿಸಿದ್ದಾರೆ ಹಾಗೂ ಚರ್ಚೆಯನ್ನು ಹೆಚ್ಚು ಮೌಲ್ಯಯುತವಾಗಿಸಿದ್ದಾರೆ ಎಂದರು.

ತುಷ್ಟೀಕರಣ ರಾಜಕೀಯ ಹಾಗೂ ಆಡಳಿತ ಮಾದರಿಯನ್ನು ದೇಶವು ದೀರ್ಘಕಾಲದವರೆಗೆ ನೋಡಿದೆ. ಆದರೆ ಇನ್ನು ಮುಂದೆ ತುಷ್ಟೀಕರಣ ನಡೆಯುವುದಿಲ್ಲ. ನಮ್ಮ ನೀತಿ ಯಾರನ್ನೂ ಓಲೈಸುವುದಲ್ಲ. ಭ್ರಷ್ಟಾಚಾರದ ವಿರುದ್ಧದ ನಮ್ಮ ಹೋರಾಟದಲ್ಲಿ ನಾವು ಉತ್ತಮ ರೀತಿಯಲ್ಲಿ ಸಾರ್ವಜನಿಕ ಬೆಂಬಲವನ್ನು ಗಳಿಸಿದ್ದೇವೆ ಎಂದು ಮೋದಿ ಹೇಳಿದ್ದಾರೆ.

ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂಬ ಘೋಷಣೆಯನ್ನು ಪುನರುಚ್ಚರಿಸಿದ ಮೋದಿ ಭ್ರಷ್ಟಾಚಾರದ ವಿರುದ್ಧ ಎನ್‌ಡಿಎ ಸರ್ಕಾರದ ಹೋರಾಟವನ್ನು ಎತ್ತಿ ತೋರಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣ ಆರಂಭಿಸುತ್ತಿದ್ದಂತೆ ಪ್ರತಿಪಕ್ಷದ ಸದಸ್ಯರು ಮಣಿಪುರಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಸದನದ ಬಾವಿಗೆ ನುಗ್ಗಿ ಪ್ರತಿಭಟನೆ ನಡೆಸಿದರು. ‘ಸರ್ವಾಧಿಕಾರವನ್ನು ಸಹಿಸುವುದಿಲ್ಲ’ ಎಂಬ ಘೋಷಣೆಗಳನ್ನು ಕೂಗುತ್ತಾ, ಮಣಿಪುರದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಪ್ರತಿಭಟಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!