Tuesday, October 8, 2024

ರಾಹುಲ್‌ ಕ್ಷಮೆಯಾಚಿಸಲಿ : ವಿಜಯೇಂದ್ರ ಒತ್ತಾಯ | ಸಿಎಂ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

ಜನಪ್ರತಿನಿಧಿ (ಬೆಂಗಳೂರು) : ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ  ಸಂಸತ್ತಿನಲ್ಲಿ ಹಿಂದೂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು ಕ್ಷಮೆಯಾಚಿಸಬೇಕೆಂದು ರಾಜ್ಯ ಬಿಜೆಪಿ ಆಗ್ರಹಿಸಿದೆ.

ಬೆಂಗಳೂರಿನಲ್ಲಿ ಪತ್ರಿಕಾ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ, ರಾಹುಲ್ ಗಾಂಧಿ ವಿಪಕ್ಷದ ನಾಯಕನಾಗಿ ಮಾಡಿದ ಚೊಚ್ಚಲ ಭಾಷಣವು ಆಧಾರರಹಿತ ಆರೋಪ ಮತ್ತು ಸುಳ್ಳುಗಳಿಂದ ತುಂಬಿದೆ. ರಾಹುಲ್ ಗಾಂಧಿ ಇಡೀ ಹಿಂದೂ ಸಮುದಾಯವನ್ನು ಅವಮಾನಿಸಿದ್ದಾರೆ ಅವರು ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಲ್ಲದೆ, ಕಾಂಗ್ರೆಸ್ ಸಂಸದರ ನಡವಳಿಕೆಯು ನಿಯಮಗಳನ್ನು ಉಲ್ಲಂಘಿಸಿರುವುದರಿಂದ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಕಟುವಾಗಿ ಟೀಕಿಸಿದ್ದಾರೆ.

ಚುನಾವಣೆಯ ಸಂದರ್ಭದಲ್ಲಿಯೂ ರಾಹುಲ್ ಗಾಂಧಿ ದೇಶಾದ್ಯಂತ ಪ್ರಚಾರ ಸಭೆಗಳಲ್ಲಿ ಸುಳ್ಳು ಪ್ರಚಾರ ಮಾಡಿದ್ದಾರೆ. ಈಗ, ವಿರೋಧ ಪಕ್ಷದ ನಾಯಕನಾಗಿ ತಮ್ಮ ಹಳೆಯ ಅಭ್ಯಾಸಗಳನ್ನು ಮುಂದುವರೆಸಿದ್ದಾರೆ. ಅವರು ಮೌಲ್ಯಗಳನ್ನು ಎತ್ತಿಹಿಡಿಯಬೇಕು, ಆದರೆ ಅವರು ಅದನ್ನು ಮಾಡುತ್ತಿಲ್ಲ ಎಂದರು, ರಾಹುಲ್ ಗಾಂಧಿ ದೇಶದ ಸೈನಿಕರು, ರೈತರು ಮತ್ತು ಇತರರನ್ನು ತಮ್ಮ ಮಾತಿನಲ್ಲಿ ಅವಮಾನಿಸಿದ್ದಾರೆ, ತಮ್ಮ ಭಾಷಣಕ್ಕೆ ಸದನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಇದಲ್ಲದೆ, 2010 ರಲ್ಲಿ ಅಂದಿನ ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಅವರು ಹಿಂದೂಗಳನ್ನು ಭಯೋತ್ಪಾದಕರು ಎಂದು ಕರೆದಿದ್ದರು ಎಂದು ವಿಜಯೇಂದ್ರ ಉಲ್ಲೇಖಿಸಿದ್ದಾರೆ. 2013ರಲ್ಲಿ ಸುಶೀಲ್ ಕುಮಾರ್ ಶಿಂಧೆ ಕೂಡ ಇದೇ ರೀತಿ ಮಾತನಾಡಿದ್ದರು. 2021 ರಲ್ಲಿ, ಹಿಂದುತ್ವವನ್ನು ಬೆಂಬಲಿಸುವವರನ್ನು ದೇಶದಿಂದ ಹೊರಹಾಕಬೇಕು ಎಂದು ಹೇಳಿದ್ದ ರಾಹುಲ್ ಗಾಂಧಿ, ಈಗ ತಮ್ಮ ಭಾಷಣದಲ್ಲಿ ಅದನ್ನೇ ಪುನರಾವರ್ತಿಸಿದ್ದಾರೆ. ಕರ್ನಾಟಕದಲ್ಲಿಯೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಇದೇ ಹೇಳಿಕೆ ನೀಡಿದ್ದಾರೆ. ಸಭಾಧ್ಯಕ್ಷರಿಗೂ ರಾಹುಲ್ ಗಾಂಧಿ ಅವಮಾನ ಮಾಡಿದ್ದಾರೆ. ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಸಿಎಂ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರನ್ನು ವಶಕ್ಕೆ ಪಡೆದುಕೊಂಡ ಪೊಲೀಸರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಮತ್ತು ಎಸ್‌ಟಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಖಂಡಿಸಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ, ಶಾಸಕ ಸುನೀಲ್‌ ಕುಮಾರ್‌ ಕಾರ್ಕಳ ಸೇರಿ ಮತ್ತಿತರರು ಇಂದು ಬೆಳಗ್ಗೆ ಬೆಂಗಳೂರಿನ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಿದ್ದಾರೆ. ಬಿಜೆಪಿ ಪ್ರತಿಭಟನೆಯ ಸೂಚನೆಯ ಹಿನ್ನೆಲೆಯಲ್ಲಿ ಸಿಎಂ ಮನೆಗೆ ಪೊಲೀಸರು ಬಿಗಿ ಬಂದೋಬಸ್ತ್‌ ಒದಗಿಸಿದ್ದರು. ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಸದ್ಯ ತಿಳಿದು ಬಂದಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!