Sunday, September 8, 2024

ಮಣಿಪುರದ ಬಗ್ಗೆ ಕೊನೆಗೂ ಬಾಯ್ಬಿಟ್ಟ ಪ್ರಧಾನಿ ಮೋದಿ !

ಜನಪ್ರತಿನಿಧಿ (ನವ ದೆಹಲಿ) : ಹಿಂಸಾಚಾರ ಪೀಡಿತ ಮಣಿಪುರ ನಿಧಾನವಾಗಿ ಮರಳಿ ಸಹಜ ಸ್ಥಿತಿಯತ್ತ ಬರುತ್ತಿದೆ. ಬಹುತೇಕ ಕಡೆಗಳಲ್ಲಿ ಶಾಲೆಗಳು ಪುನರಾರಂಭಗೊಂಡಿದೆ. ರಾಜ್ಯದಲ್ಲಿ ಸಾಂತಿ ಮರುಕಳುಹಿಸುವಂತೆ ಮಾಡುವ ಉದ್ದೇಶದಿಂದ ಎಲ್ಲಾ ರೀತಿಯಲ್ಲಿ ಪ್ರಯತ್ನ ಮಾಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈವರೆಗೆ ಮಣಿಪುರದ ವಿಚಾರದ ಬಗ್ಗೆ ಚರ್ಚೆ ಅಗತ್ಯವಿದೆ ಎಂಬ ಪ್ರತಿಪಕ್ಷಗಳ ಒತ್ತಾಯವಿದ್ದರೂ ತುಟಿ ಬಿಚ್ಚಿರದ ಮೋದಿ, ಇಂದು(ಬುಧವಾರ) ರಾಜ್ಯಸಭೆಯಲ್ಲಿ ಮಣಿಪುರದ ವಿಚಾರದ ಬಗ್ಗೆ ಪ್ರಸ್ತಾಪಿಸಿದ್ದಾರೆ.

ರಾಷ್ಟ್ರಪತಿಗಳ ಭಾಷಭದ ಮೇಲಿನ ವಂದನಾ ನಿರ್ಣಯದ ಚರ್ಚೆ ಸಂದರ್ಭದಲ್ಲಿ ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ, ಮಣಿಪುರದಲ್ಲಿ ಶಾಮತಿ ಸುವ್ಯವಸ್ಥೆ ಕಾಪಾಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು.

ಇನ್ನು, ಹಿಂಸಾಚಾರ ಆರಂಭವಾದಾಗಿನಿಂದ ಇಲ್ಲಿಯವರೆಗೆ ಮಣಿಪುರ ಪ್ರಕರಣಕ್ಕೆ ಸಂಬಂಸಿದಂತೆ 500ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. 11,000ಕ್ಕೂ ಹೆಚ್ಚು ಎಫ್‌ಐಆರ್‌ ಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಮಣಿಪುರದಲ್ಲಿ ಪ್ರವಾಹದ ಸ್ಥಿತಿ ಸೃಷ್ಟಿಯಾಗಿರುವ ಕಾರಣದಿಂದ ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ(ಎನ್‌ಡಿಆರ್‌ಎಫ್‌) ಎರಡು ತಂಡಗಳನ್ನು ರಾಜ್ಯಕ್ಕೆ ಕಳುಹಿಸಿಕೊಡಲಾಗಿದೆ ಎಂದೂ ತಿಳಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!