spot_img
Saturday, February 14, 2026
spot_img

ಹೆಸಕುತ್ತೂರು ಪ್ರಾಥಮಿಕ ಶಾಲೆ : ಯಕ್ಷಗಾನ ತರಗತಿ ಉದ್ಘಾಟನೆ

KUNDAPURA: “ಶಾಲೆಯಲ್ಲಿಯೇ ಯಕ್ಷಗಾನ ಕಲಿಯಲು ಸಿಗುತ್ತಿರುವ ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಶ್ರದ್ಧೆ ಆಸಕ್ತಿಯಿಂದ ಕಲಿತಾಗ ಉತ್ತಮ ಕಲಾವಿದರಾಗಿ ಬೆಳೆಯಲು ಸಾಧ್ಯ ” ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದ  ಎಂ ಎ ನಾಯ್ಕ್ ಮಂದಾರ್ತಿ ನುಡಿದರು.
ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸಕುತ್ತೂರು ಇಲ್ಲಿ ನೂತನವಾಗಿ ಆರಂಭಿಸಲಾದ ಯಕ್ಷಗಾನ ತರಗತಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಕ್ರಷ್ಣ ಕೆದ್ಲಾಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಯಕ್ಷಗುರುಗಳಾದ  ಮಂಜುನಾಥ ಕುಲಾಲ್ ಐರೋಡಿ ತರಗತಿಯ ಸ್ವರೂಪದ ಕುರಿತು ಮಾತನಾಡಿದರು. ಹಿರಿಯ ಯಕ್ಷ ಪೋಷಕರಾದ  ನಾರಾಯಣ ಮೊಗವೀರ ಹಾರ್ಯಾಡಿ, ಶಾಲಾ ಸಹ ಶಿಕ್ಷಕರಾದ ಸಂಜೀವ ಎಂ, ಜಯಲಕ್ಷ್ಮಿ ಬಿ, ವಿಜಯಾ ಆರ್, ವಿಜಯ ಶೆಟ್ಟಿ, , ಸ್ವಾತಿ ಬಿ, ಗೌರವ ಶಿಕ್ಷಕಿ ಮಧುರ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ್ ಸ್ವಾಗತಿಸಿದರು. ಅಶೋಕ ತೆಕ್ಕಟ್ಟೆ ವಂದಿಸಿದರು. ರವೀಂದ್ರ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!