spot_img
Saturday, February 14, 2026
spot_img

ದರ್ಶನ್‌ ನ್ಯಾಯಾಂಗ ಬಂಧನ ಇಂದಿಗೆ ಅಂತ್ಯ | ವಿಡಿಯೊ ಕಾನ್ಫರೆನ್ಸ್‌ನಲ್ಲಿ ವಿಚಾರಣೆ

ಜನಪ್ರತಿನಿಧಿ (ಬೆಂಗಳೂರು) : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ನಟ ದರ್ಶನ್ ಅವರ 14 ದಿನಗಳ ನ್ಯಾಯಾಂಗ ಬಂಧನ ಇಂದಿಗೆ(ಗುರುವಾರ) ಅಂತ್ಯವಾಗುತ್ತಿದೆ.

ಇಂದು ನಟ ದರ್ಶನ್‌ ಅವರ ಜಾಮೀನು ಅರ್ಜಿಯನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸುವ ಸಾಧ್ಯತೆಯಿದ್ದು, ದರ್ಶನ್‌ ಅವರಿಗೆ ಜಾಮೀನು ಸದೊರಕಲಿದೆಯೇ ಅಥವಾ ಕಾರಾಗೃಹ ವಾಸ ಮುಂದುವರಿಯಲಿದೆಯೇ ಎನ್ನುವುದು ಅಭಿಮಾನಿಗಳ ಮುಂದಿರುವ ಪ್ರಶ್ನೆಯಾಗಿದೆ.

ವಿಡಿಯೊ ಕಾನ್ಫರೆನ್ಸ್ ನಲ್ಲಿ ವಿಚಾರಣೆ: ನ್ಯಾಯಾಂಗ ಬಂಧನ ಅಂತ್ಯವಾಗುವ ಕಾರಣ ವಿಡಿಯೊ ಕಾನ್ಫರೆನ್ಸ್ ಮೂಲಕ ಇಂದು ನ್ಯಾಯಾಧೀಶರು ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳನ್ನು ವಿಚಾರಣೆ ನಡೆಸುವ ಸಾಧ್ಯತೆಯಿದೆ. ಅದಕ್ಕಾಗಿ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ದರ್ಶನ್ ಅವರನ್ನು ವಿಚಾರಣೆಗೆ ಕರೆದಾಗ ಹೊರಗೆ ಮಾಧ್ಯಮ ಪ್ರತಿನಿಧಿಗಳು, ಅಭಿಮಾನಿಗಳು ಜಮಾಯಿಸುತ್ತಾರೆ, ಇದರಿಂದ ತೊಂದರೆಯಾಗುತ್ತದೆ ಎಂದು ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರು ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವು ಆರೋಪಿಗಳನ್ನು ಜೂನ್ 11ರಂದು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದರು. ಜೂನ್ 22ರಂದು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!