spot_img
Wednesday, April 1, 2026
spot_img

ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ | 15 ದಿನಗಳಲ್ಲಿದು 10ನೇ ಘಟನೆ

ಜನಪ್ರತಿನಿಧಿ (ಪಾಟ್ನಾ) : ಬಿಹಾರದಲ್ಲಿ ಇಂದು(ಗುರುವಾರ) ಮತ್ತೊಂದು ಸೇತುವೆ ಕುಸಿದು ಬಿದ್ದಿದ್ದು, ಕೇವಲ ಹದಿನೈದು ದಿನಗಳಲ್ಲಿ ಬಿಹಾರ ರಾಜ್ಯದಲ್ಲಿ 10 ಸೇತುವೆಗಳು ಕುಸಿದು ಬಿದ್ದಿರುವ ಘಟನೆ ನಡೆದಿದೆ.

ಈ ಬಗ್ಗೆ ಮಾಹಿತಿ ನೀಡಿದ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಮನ್ ಸಮೀರ್,  ಕಳೆದ 24 ಗಂಟೆಗಳಲ್ಲಿ ಮತ್ತೆರಡು ಸೇತುವೆ ಕುಸಿತಕ್ಕೆ ಸಾಕ್ಷಿಯಾದ ಸರನ್‌ನಿಂದ ವರದಿಯಾದ ಇತ್ತೀಚಿನ ಘಟನೆ ಇದಾಗಿದೆ ಎಂದು ಹೇಳಿದ್ದಾರೆ.

15 ವರ್ಷಗಳ ಹಿಂದೆ ನಿರ್ಮಿಸಿದ್ದ ಸೇತುವೆಯೊಂದು ಇಂದು ಬೆಳಗ್ಗೆ ಕುಸಿದು ಬಿದ್ದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಬನೇಯಪುರ ಬ್ಲಾಕ್‌ನಲ್ಲಿದ್ದ ಗಂಡಕಿ ನದಿಯ ಮೇಲಿನ ಸಣ್ಣ ಸೇತುವೆ ಕುಸಿದು ಬಿದ್ದಿದ್ದು, ಈ ಸೇತುವೆ ಸರನ್‌ನ ಹಲವಾರು ಹಳ್ಳಿಗಳನ್ನು ನೆರೆಯ ಸಿವಾನ್ ಜಿಲ್ಲೆಯೊಂದಿಗೆ ಸಂಪರ್ಕಿಸುತ್ತಿತ್ತು.

ಪಿಟಿಐ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ ಜಿಲ್ಲಾ ಮ್ಯಾಜಿಸ್ಟ್ರೇಟ್, “ಈ ಸಣ್ಣ ಸೇತುವೆಯನ್ನು 15 ವರ್ಷಗಳ ಹಿಂದೆ ನಿರ್ಮಿಸಲಾಗಿತ್ತು. ನಾನು ಘಟನಾ ಸ್ಥಳಕ್ಕೆ ತೆರಳುತ್ತಿದ್ದೇನೆ. ಈಗಾಗಲೇ ಜಿಲ್ಲಾಡಳಿತದ ಹಲವಾರು ಅಧಿಕಾರಿಗಳು ಅಲ್ಲಿಗೆ ತೆರಳಿದ್ದಾರೆ. ಸೇತುವೆ ಕುಸಿತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ಇತ್ತೀಚೆಗೆ ಹೂಳು ತೆಗೆಯುವ ಕೆಲಸ ಕೈಗೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.

ನಿನ್ನೆ ಸರನ್ ಜಿಲ್ಲೆಯಲ್ಲಿ ಎರಡು ಸಣ್ಣ ಸೇತುವೆಗಳ ಕುಸಿದು ಬಿದ್ದಿದ್ದವು. ಒಂದು ಜನತಾ ಬಜಾರ್ ಪ್ರದೇಶದಲ್ಲಿ ಮತ್ತು ಇನ್ನೊಂದು ಲಹ್ಲಾದ್‌ಪುರ ಪ್ರದೇಶದಲ್ಲಿದ್ದ ಸೇತುವೆಗಳು ಕುಸಿದು ಬಿದ್ದಿದ್ದವು.

ಜಿಲ್ಲೆಯಲ್ಲಿ ಈ ಕಿರು ಸೇತುವೆಗಳು ಕುಸಿದಿರುವುದಕ್ಕೆ ಕಾರಣ ತಿಳಿಯಲು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!