spot_img
Wednesday, April 1, 2026
spot_img

ವಿಶ್ವವಿಜೇತ ಟೀಂ ಇಂಡಿಯಾದೊಂದಿಗೆ ಮೋದಿ ಕುಶಲೋಪರಿ | ಸಂಜೆ ಸಂಭ್ರಮಾಚರಣೆ

ಜನಪ್ರತಿನಿಧಿ (ನವದೆಹಲಿ) :  2024 ರ ಆವೃತ್ತಿಯ ಟಿ 20 ವಿಶ್ವಕಪ್‌ ಗೆದ್ದ ನಂತರ ಇಂದು (ಗುರುವಾರ) ತವರಿಗೆ ಮರಳಿದ ಹಿಟ್‌ಮ್ಯಾನ್ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದೆ.

ಪ್ರಧಾನಿ ಮೋದಿಯವರನ್ನು ಭೇಟಿಯಾಗುವಾಗ ಮೆನ್ ಇನ್ ಬ್ಲೂ ವಿಶೇಷ ಜರ್ಸಿಯನ್ನು ಧರಿಸಿದ್ದರು. ಜೆರ್ಸಿಯ ಮುಂಭಾಗದಲ್ಲಿ ‘ಚಾಂಪಿಯನ್ಸ್’ ಎಂದು ದಪ್ಪ ಅಕ್ಷರದಲ್ಲಿ ಬರೆಯಲಾಗಿತ್ತು.

ಟೀಂ ಇಂಡಿಯಾ ಆಟಗಾರರನ್ನು ಪ್ರಧಾನಿ ಮೋದಿಯವರು ಅಭಿನಂದಿಸಿ ಅವರೊಂದಿಗೆ ಉಪಾಹಾರ ಸೇವಿಸಿದರು. ಈ ವೇಳೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಹಾಗೂ ಕಾರ್ಯದರ್ಶಿ ಜಯ್​ ಶಾ ಕೂಡ ಉಪಸ್ಥಿತರಿದ್ದರು.

ಪ್ರಧಾನಿ ಮೋದಿ, ಕೆಲ ಹೊತ್ತು ಕುಶಲೋಪರಿ ನಡೆಸಿದರು. ಅಲ್ಲದೆ ಆ ಬಳಿಕ ಟೀಮ್ ಇಂಡಿಯಾ ಆಟಗಾರರು ಪ್ರಧಾನಿಯೊಂದಿಗೆ ಟಿ20 ವಿಶ್ವಕಪ್ ಹಿಡಿದು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಇಂದು ದೆಹಲಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಗಿನ ಜಾವ 6 ಗಂಟೆಗೆ ಬಂದಿಳಿದ ನಂತರ ಅಲ್ಲಿಂದ ನೇರ ಮೌರ್ಯ ಹೊಟೇಲ್ ಗೆ ತೆರಳಿದರು. ಅಲ್ಲಿ ಬೆಳಗ್ಗೆ ಹೊಟೇಲ್ ಸಿಬ್ಬಂದಿ ಆಟಗಾರರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಸಂಭ್ರಮಿಸಿದರು.

ಇನ್ನು ಇಂದು ಸಂಜೆ 5 ಗಂಟೆಗೆ ಮುಂಬೈನಲ್ಲಿ ಮರೈನ್ ಡ್ರೈವ್ ಮತ್ತು ಐಕಾನಿಕ್ ವಾಂಖೆಡೆ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ಮಾಡಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!