spot_img
Wednesday, April 1, 2026
spot_img

ರಟ್ಟಾಡಿ ಸುಂಟರಗಾಳಿ, ಅಸಂಖ್ಯ ಮರಗಳು ಧರಾಶಾಹಿ | ಸ್ಥಳಕ್ಕೆ ಪ್ರತಾಪಚಂದ್ರ ಶೆಟ್ಟಿ ಭೇಟಿ

ಜನಪ್ರತಿನಿಧಿ(ರಟ್ಟಾಡಿ, ಅಮಾಸೆಬೈಲು) : ಉಡುಪಿಯ ಅಮಾವಾಸ್ಯೆಬೈಲು ವ್ಯಾಪ್ತಿಯಲ್ಲಿ ಸುಂಟರಗಾಳಿ ಕಾಣಿಸಿಕೊಂಡಿದೆ. ಭಾರೀ ಸುಂಟರಗಾಳಿಗೆ ರಟ್ಟಾಡಿ ಗ್ರಾಮದ ಕೃಷಿಕರು ಕಂಗಾಲಾಗಿದ್ದಾರೆ.

ದೊಡ್ಡ ಮಟ್ಟದ ಸುಂಟರಗಾಳಿ ಬೀಸಿರುವ ಪರಿಣಾಮ ಅಪಾರ ಪ್ರಮಾಣದ ಮರ, ಮನೆಗಳಿಗೆ ಹಾನಿಯಾಗಿದೆ. ಭಾರಿ ಶಬ್ದದೊಂದಿಗೆ ಸುಂಟರಗಾಳಿ ಅಪ್ಪಳಿಸಿದೆ. ಕೆಲವು ಹೊತ್ತು ಚಂಡಮಾರುತದಂತೆ ಸುಂಟರಗಾಳಿ ಭಾಸವಾಗಿದೆ. ಮೊದಲ ಬಾರಿಗೆ ಇಂತಹ ಅನುಭವಕ್ಕೆ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಗ್ರಾಮ ಪಂಚಾಯತ್‌ ವ್ಯಾಪ್ತಿಯ ರಟ್ಟಾಡಿಯಲ್ಲಿ ಏಕಾಏಕಿ ಈ ಸುಂಟರಗಾಳಿ ಕಾಣಿಸಿಕೊಂಡಿದೆ.

ರಟ್ಟಾಡಿ ವ್ಯಾಪ್ತಿಯಲ್ಲಿರುವ ಸಾವಿರಾರು ಮರಗಳು ಧರಶಾಹಿಯಾಗಿವೆ. 5 ಸಾವಿರಕ್ಕೂ ಅಧಿಕ ಅಡಿಕೆ ಮರ, 2 ಸಾವಿರದಷ್ಟು ರಬ್ಬರ್‌ ಮರ ಹಾಗೂ ತೆಂಗಿಗೂ ಹಾನಿಯಾಗಿದೆ. ರಟ್ಟಾಡಿ ವ್ಯಾಪ್ತಿಯ ಹಲವು ಮನೆಗಳಿಗೂ ಸುಂಟರಗಾಳಿಯಿಂದ ಹಾನಿಯಾಗಿದೆ.

ಘಟನಾ ಸ್ಥಳಕ್ಕೆ ಪ್ರತಾಪಚಂದ್ರ ಶೆಟ್ಟಿ ಭೇಟಿ :
ವಿಧಾನ ಪರಿಷತ್ ಮಾಜಿ ಸಭಾಪತಿ ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ  ಕೆ. ಪ್ರತಾಪಚಂದ್ರ ಶೆಟ್ಟಿ ಅವರು ಕುಳ್ಳುಂಜೆ , ರಟ್ಟಾಡಿ ಸುಂಟರಗಾಳಿ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ , ಮಾಜಿ ತಾಲೂಕು ಪಂಚಾಯತ್ ಸದಸ್ಯ ಕೆದೂರು ಸದಾನಂದ ಶೆಟ್ಟಿ , ಹಾಲಾಡಿ ಗ್ರಾಪಂ ಅದ್ಯಕ್ಷ ಚೋರಾಡಿ ಅಶೋಕ ಶೆಟ್ಟಿ , ಸದಾಶಿವ ಶೆಟ್ಟಿ , ಶಂಕರನಾರಾಯಣ, ಅಜಿತ್ ರಟ್ಟಾಡಿ , ಸಂಪತ್ ಶೆಟ್ಟಿ ರಟ್ಟಾಡಿ , ಕ್ರಷ್ಣ ರಟ್ಟಾಡಿ ಜೊತೆಯಲ್ಲಿದ್ದರು.

ಇನ್ನು, ರಟ್ಟಾಡಿಯಲ್ಲಿ ಭೀಕರ ಸುಂಟರಗಾಳಿ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅಮಾವಾಸ್ಯೆ ಬೈಲು ಗ್ರಾಮ ಪಂಚಾಯತ್‌ ಪಿಡಿಓ ಭೇಟಿ ನೀಡಿ, ಡ್ರೋನ್‌ ಕ್ಯಾಮೆರಾ ಮೂಲಕ ಮರ, ಮನೆಗಳ ಹಾನಿ ಕುರಿತು ಅಂದಾಜು ಲೆಕ್ಕಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!