Thursday, November 14, 2024

ಜು.6ರಂದು 350 ಶಾಲೆಯ 41ಸಾವಿರ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ| ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಟ್ರಸ್ಟ್, ಸಮೃದ್ಧ ಜನಸೇವಾ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಕಾರ್ಯಕ್ರಮ

ಬೈಂದೂರು: ಬೆಂಗಳೂರಿನ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಬೈಂದೂರಿನ ಸಮೃದ್ಧ ಜನಸೇವಾ ಚಾರಿಟೆಬಲ್ ಟ್ರಸ್ಟ್ ಮತ್ತು ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಕಾರದೊಂದಿಗೆ ಜುಲೈ 6ರ ಬೆಳಗ್ಗೆ 10.30ಕ್ಕೆ ಯಡ್ತರೆಯ ಜೆ.ಎನ್.ಆರ್.ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ 350 ಸರ್ಕಾರಿ/ಅನುದಾನಿತ ಶಾಲೆಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ 41,000 ಜತೆ ಉಚಿತ ಶಾಲಾ ಸಮವಸ್ತ್ರಗಳ ವಿಚಾರಣೆ ನಡೆಯಲಿದೆ.

ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಹೆಗ್ಗುಂಜೆ ರಾಜೀವ್ ಶೆಟ್ಟಿ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಡಾ. ಎಚ್.ಎಸ್.ಶೆಟ್ಟಿ ಪ್ರಸ್ತಾವನೆಗೈಯಲಿದ್ದಾರೆ. ಶಾಸಕರಾದ ಗುರುರಾಜ್ ಗಂಟಿಹೊಳೆ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ವೈ.ರಾಘವೇಂದ್ರ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಯಶ್‍ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಸಮೃದ್ಧ ಜನಸೇವಾ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಗಣಪತಿ ಭಾಗವಹಿಸಲಿದ್ದಾರೆ.

ಇದೇ ವೇಳೆ ಹೆಗ್ಗುಂಜೆ ರಾಜೀವ್ ಶೆಟ್ಟಿ ವಿದ್ಯಾ ಪೆÇೀಷಕ್ ಪ್ರಶಸ್ತಿಯನ್ನು ಹಿರಿಯ ಶಿಕ್ಷಕರು ಹಾಗೂ ಯಕ್ಷಗಾನ ಪ್ರಸಂಗಕರ್ತರಾದ ಕಂದಾವರ ರಘುರಾಮ್ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!