Saturday, October 12, 2024

ಅನ್ನಭಾಗ್ಯದ ಅಕ್ಕಿಯನ್ನು ಮಾರಾಟ ಮಾಡುವವರಿಗೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಿ : ಹೈಕೋರ್ಟ್‌

ಜನಪ್ರತಿನಿಧಿ (ಬೆಂಗಳೂರು) : ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಹೋಟೆಲ್ ಗಳಿಗೆ ಮಾರಾಟ ಮಾಡುವ ಅಯೋಗ್ಯರ ವಿರುದ್ಧ ಜಿಲ್ಲಾಧಿಕಾರಿಗಳು ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ಮೌಖಿಕವಾಗಿ ಸೂಚಿಸಿದೆ.

ಪ್ರಕರಣವೊಂದರ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿ ವಿ.ಶ್ರೀಷಾನಂದ ಅವರಿದ್ದ ನ್ಯಾಯಪೀಠ, ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಹೋಟೆಲ್ ಗಳಿಗೆ ಮಾರಾಟ ಮಾಡುವ ಮಾಫಿಯಾ ಬಗ್ಗೆ ತೀವ್ರವಾಗಿ ಆಕ್ರೋಶ ಹೊರ ಹಾಕಿದರು.

ಕಳ್ಳಸಾಗಣೆದಾರರು ಸರಕುಪಟ್ಟಿ, ಸಿ ಫಾರಂ ಹಾಗೂ ರಸೀದಿಯಂತಹ ಅಗತ್ಯ ದಾಖಲೆಗಳು ಇಲ್ಲದೆ ಅಕ್ಕಿಯನ್ನು ಲಾರಿಗಳಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಿಸುತ್ತಾರೆ. ಇಂತಹವರನ್ನು ಪತ್ತೆ ಹಚ್ಚಿದಾಗ ಅವರ ವಿರುದ್ಧ ತಕ್ಕ ಕ್ರಮ ಕೈಗೊಳ್ಳುವ ಅಧಿಕಾರ ಸ್ಥಳೀಯ ಜಿಲ್ಲಾಧಿಕಾರಿಗಳಿಗೆ ಇರುತ್ತದೆ. ಆದರೆ, ಅವರನ್ನು ಬಚಾವು ಮಾಡುವಂತಹ ವ್ಯವಸ್ಥೆ ಜೊತೆಯಲ್ಲಿಯೇ ಇರಲಿದೆ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.

ಕಾನೂನನ್ನು ಎಷ್ಟೇ ಬಿಗಿಗೊಳಿಸಿದರೂ ಇಂದು ಕಳ್ಳಸಾಗಣೆದಾರರು, ನನಗೆ ನೀನು ರಕ್ಷಣೆ ಮಾಡು ನಿನ್ನನ್ನು ನಾನು ರಕ್ಷಣೆ ಮಾಡುತ್ತೇನೆ ಎನ್ನುವ ಮಟ್ಟಕ್ಕೆ ಇಳಿದಿದ್ದಾರೆ. ಅನ್ನಭಾಗ್ಯದಲ್ಲಿ ನನ್ನ ನಿಮ್ಮ ದುಡ್ಡು ಅಡಗಿರುತ್ತದೆ. ಸರ್ಕಾರ ಅದಕ್ಕೆ ಸಬ್ಸಿಡಿ ನೀಡುವ ಮೂಲಕ ಬಡವರ ಕಲ್ಯಾಣಕ್ಕೆಂದು ಯೋಜನೆ ಜಾರಿಗೊಳಿಸಿರುತ್ತದೆ. ಇದನ್ನು ಯಾರೂ ಮರೆಯಬಾರದು ಎಂದು ನ್ಯಾಯಪೀಠ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!