Sunday, September 8, 2024

ನಮ್ಮ ನಾಡ ಒಕ್ಕೂಟದಿಂದ ವೃತ್ತಿ ಮಾರ್ಗದರ್ಶನ: ಸಾಧಕರಿಗೆ ಸನ್ಮಾನ

ಉಡುಪಿ: ನಮ್ಮ ನಾಡ ಒಕ್ಕೂಟದಿಂದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉಡುಪಿಯ ಹೋಟೆಲ್ ಮಣಿಪಾಲ್ ಇನ್ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.

ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾಧ್ಯಕ್ಷ ಮುಷ್ತಾಕ್ ಅಹ್ಮದ್ ಬೆಳ್ವೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಜನಾಬ್ ಕೆ. ಅಬ್ದುಲ್ ಜಬ್ಬಾರ್ ಸಾಹೇಬ್ ಪ್ರತಿಭಾವಂತ ವಿದ್ಯಾರ್ಥಿಗಳ ಸಾಧನೆಗಳನ್ನು ಮೆಚ್ಚುಗೆ ವ್ಯಕ್ತಪಡಿಸುತ್ತಾ ನಮ್ಮ ನಾಡ ಒಕ್ಕೂಟದ ಸೇವಾ ಕಾರ್ಯಗಳನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.

ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ವಿದ್ಯಾರ್ಥಿಗಳನ್ನು ಶುಭಹಾರೈಸಿದರು.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಜನಾಬ್ ಮುಹಮ್ಮದ್ ಸಿರಾಜ್, ಮಲ್ನಾಡ್ ಲೈಫ್ ಲೈನ್ ಆಸ್ಪತ್ರೆ ಶಿವಮೊಗ್ಗದ ಆಡಳಿತ ನಿರ್ದೇಶಕ ಡಾ ಇರ್ಫಾನ್ ಅಹ್ಮದ್, ಇಂಟರ್ನ್ಯಾಷನಲ್ ಬ್ಯಾಂಕ್ ಕುವೈತ್ ಎಕ್ಸಿಕ್ಯೂಟಿವ್ ಮೆನೇಜರ್ ಜನಾಬ್ ಸರ್ಫರಾಜ್ ಸುಲೈಮಾನ್ ಸಂದರ್ಭೋಚಿತವಾಗಿ ಮಾತನಾಡಿ ವಿದ್ಯಾರ್ಥಿಗಳನ್ನು ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿ ಡಾ. ಫತಾವುಲ್ಲಾ ಎಸ್. ಎಮ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಮಂಗಳೂರು ವಿಶ್ವವಿದ್ಯಾಲಯದ ಎಂ.ಎಸ್ಸಿ ಸ್ನಾತಕೋತ್ತರ ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್ ಪಡೆದ ಸಯ್ಯದಾ ರೇಹಾ ಖಾದ್ರಿ, ಆಂಧ್ರ ಪ್ರದೇಶದ ವಿಜಯವಾಡದಲ್ಲಿ ನಡೆದ ದಕ್ಷಿಣ ಭಾರತ ಮಟ್ಟದ ೬೦ ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದ ಬೈಂದೂರಿನ ರತ್ತುಬಾಯ್ ಪ್ರೌಢ ಶಾಲೆಯ ವಿದ್ಯಾರ್ಥಿ ಜುನೈದ್ ಅರಮನೆಹಕ್ಲು, ಉಡುಪಿ ಜಿಲ್ಲೆಯ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಗರಿಷ್ಠ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಮತ್ತು ಕರಾವಳಿ ಕರ್ನಾಟಕ ಭಾಗದ ಮೂರು ಜಿಲ್ಲೆಗಳಲ್ಲಿ ನಡೆದ ಟ್ಯಾಲೆಂಟ್ ಸರ್ಚ್ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ೧೩ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಈ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ ೧೦೦% ಫಲಿತಾಂಶ ಪಡೆದ ಉಡುಪಿ ಜಿಲ್ಲೆಯ ಶಾಲೆಗಳ ಮುಖ್ಯಸ್ಥರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬಿ‌ಎ‌ಎಮ್ ಸೀ ಫುಡ್ಸ್, ಗೋವಾದ ಮಾಲೀಕರಾದ ಜನಾಬ್ ಆರಿಫ್, ಅಚಲಾ ಎಂಟರ್ಪ್ರೈಸಸ್ ಮಾಲಕರು ಹಾಗೂ ಬೆಳ್ವೆ ಸಂದೇಶ್ ಕಿಣಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಬಿ.ಸತೀಶ್ ಕಿಣಿ ಬೆಳ್ವೆ ಎನ್‌ಎನ್‌ಒ ಟ್ರಸ್ಟಿ ಪೀರು ಸಾಹೇಬ್ ಉಡುಪಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝಹೀರ್ ನಾಖುದಾ ಗಂಗೊಳ್ಳಿ, ಜಿಲ್ಲಾ ಕೋಶಾಧಿಕಾರಿ ಯಾಹ್ಯ ನಖ್ವಾ ಮಲ್ಪೆ, ಕುಂದಾಪುರ ತಾಲೂಕು ಅಧ್ಯಕ್ಷರಾದ ದಸ್ತಗೀರ್ ಕಂಡ್ಲೂರು, ಉಡುಪಿ ತಾಲೂಕು ಅಧ್ಯಕ್ಷರಾದ ನಝೀರ್ ನೇಜಾರ್, ಬ್ರಹ್ಮಾವರ ತಾಲೂಕು ಅಧ್ಯಕ್ಷರಾದ ತಾಜುದ್ದೀನ್ ಇಬ್ರಾಹಿಂ, ಕಾಪು ತಾಲೂಕು ಅಧ್ಯಕ್ಷರಾದ ಅಶ್ರಫ್ ಪಡುಬಿದ್ರಿ, ಕಾರ್ಕಳ ತಾಲೂಕು ಅಧ್ಯಕ್ಷರಾದ ಶಾಕಿರ್ ಹುಸೇನ್ ಶೀಶಾ, ಎನ್‌ಎನ್‌ಒ ಜರ್ಮನಿಯ ಝೀಶಾನ್ ಉಡುಪಿ, ಟಿ. ಎಸ್. ಅನ್ಸಾರ್ ಉಡುಪಿ ಹಾಗೂ ಇತರರು ಉಪಸ್ಥಿತರಿದ್ದರು.

ಶಿರೂರಿನ ಸುಹೇಬ್ ಅಮಾನ್ ಶೇಖ್ಜಿರವರ ಕುರ್ ಆನ್ ಪಠಣ ಗೈದು ಪ್ರಾರ್ಥಿಸಿದರು. ಕಾರ್ಯಕ್ರಮದ ಸಂಚಾಲಕರಾದ ಮೌಲಾನಾ ಝಮೀರ್ ಅಹ್ಮದ್ ರಶಾದಿ ಸ್ವಾಗತಿಸಿದರು, ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಹುಸೇನ್ ಹೈಕಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಉಪಾಧ್ಯಕ್ಷರಾದ ಮುಜಾವರ್ ಅಬು ಮುಹಮ್ಮದ್ ಕುಂದಾಪುರ ವಂದಿಸಿದರು. ಕುಂದಾಪುರ ತಾಲೂಕು ಕಾರ್ಯದರ್ಶಿ ಫಝಲ್ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

 

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!