Thursday, November 21, 2024

ಕುಂದಾಪುರ: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಸನ ಮುಕ್ತ ಭಾರತ ಕಾರ್ಯಕ್ರಮಕ್ಕೆ ಚಾಲನೆ

ಕುಂದಾಪುರ:  ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಾದಕ ದ್ರವ್ಯ ವಿರೋಧಿ ಕ್ಲಬ್ ಮತ್ತು ಇ ಎಲ್ ಸಿ ಕ್ಲಬ್ ಹಾಗು ಉಡುಪಿ ಜಿಲ್ಲಾ ಪೋಲಿಸ ಸಹಭಾಗಿತ್ವದಲ್ಲಿ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಂದಾಪುರ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಭಾಗ್ಯಲಕ್ಷ್ಮಿ ಅವರು ಮಾದಕ ದ್ರವ್ಯದ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು

. ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಆಗಮಿಸಿದ ಸಬ್ ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್ ಸೈಬರ್ ಕ್ರೈಂ ಮತ್ತು ಫೋಕ್ಸೊ ಕಾಯಿದೆ ಕುರಿತು ಕುರಿತು ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಕಂಡ್ಲೂರು ಗ್ರಾಮಾಂತರ ಪೊಲೀಸ್ ಠಾಣೆಯ ಪವನ್ ನಾಯಕ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸಂಘಟಿಸಿದ ಶ್ರೀಮತಿ ಸಂಧ್ಯಾ ನಾಯಕ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕುಮಾರ ಯಮನೂರ್ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ನಿಸರ್ಗ ನಿರೂಪಿಸಿದರು. ಕುಮಾರಿ ಸೃಜನ ವಂದಿಸಿದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!