Sunday, October 13, 2024

ವಾರಿಸ್ ಪಂಜಾಬ್ ದೇ ಸಂಘಟನೆಯ ಅಮೃತಪಾಲ್ ಸಿಂಗ್ ಪ್ರಮಾಣ ವಚನ ಸ್ವೀಕಾರಕ್ಕೆ ದೆಹಲಿಗೆ !

ಜನಪ್ರತಿನಿಧಿ (ನವ ದೆಹಲಿ) : ಕಾರಾಗೃಹದಲ್ಲಿರು ‘ವಾರಿಸ್ ಪಂಜಾಬ್ ದೇ’ ಸಂಘಟನೆಯ ಮುಖ್ಯಸ್ಥ ಅಮೃತಪಾಲ್ ಸಿಂಗ್  ಇಂದು(ಶುಕ್ರವಾರ) ಅಸ್ಸಾಂನ ದಿಬ್ರುಗಢ ಕಾರಾಗೃಹದಿಂದ ಪಂಜಾಬ್ ಪೊಲೀಸರ ಭದ್ರತೆಯೊಂದಿಗೆ ಹೊರಗೆ ಬಂದಿದ್ದು, ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿ ಲೋಕಸಭೆಯ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಪಂಜಾಬ್‌ನ ಖದೂರ್ ಸಾಹಿಬ್ ಲೋಕಸಭಾ ಕ್ಷೇತ್ರದಿಂದ 2024 ರ ಲೋಕಸಭಾ ಚುನಾವಣೆಯಲ್ಲಿ, ಸಿಂಗ್  ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಕಾಂಗ್ರೆಸ್‌ ಅಭ್ಯರ್ಥಿಯ ವಿರುದ್ಧ ಜಯ ಸಾಧಿಸಿದ್ದರು.

ಅಮೃತಪಾಲ್ ಸಿಂಗ್ 1,97,120 ಮತಗಳ ಅಂತರದಿಂದ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಕುಲ್ಬೀರ್ ಸಿಂಗ್ ಝಿರಾ ಅವರನ್ನು ಪರಾಭವಗೊಳಿಸಿದ್ದರು.

ಖಲಿಸ್ತಾನಿ ಉಗ್ರಗಾಮಿ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆಯನ್ನು ಹತ್ಯೆ ಮಾಡಿದ ನಂತರ ಅಮೃತಪಾಲ್ ಸಿಂಗ್ ಅವರನ್ನು ಕಳೆದ ವರ್ಷ ಏಪ್ರಿಲ್ 23 ರಂದು ಬಂಧಿಸಲಾಗಿತ್ತು. ನಂತರ ಅವರ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ಪ್ರಸ್ತುತ ಅಸ್ಸಾಂನ ದಿಬ್ರುಗಢ ಜೈಲಿನಲ್ಲಿರುವ ‘ವಾರಿಸ್ ಪಂಜಾಬ್ ದೇ’ ಸಂಘಟನೆಯ ಮುಖ್ಯಸ್ಥರಿಗೆ ಪ್ರಮಾಣವಚನ ಸ್ವೀಕರಿಸಲು ನಾಲ್ಕು ದಿನಗಳ ಪೆರೋಲ್ ನೀಡಲಾಗಿದೆ ಎಂದು ಅಮೃತಸರದ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!