Sunday, September 8, 2024

ದೇಹ ಮತ್ತು ಮನಸ್ಸಿನ ಆರೋಗ್ಯಕ್ಕೆ ಯೋಗ ಸಹಕಾರಿ- ಡಾ. ಶಿಲ್ಪಾ ಕೆ

ಕುಂದಾಪುರ: ಯೋಗ, ಭಾರತ ಪ್ರಪಂಚಕ್ಕೆ ನೀಡಿದ ಅತಿ ದೊಡ್ಡ ಕೊಡುಗೆ. ಜಾತಿ, ಭಾಷೆ, ಧರ್ಮ ದೇಶ ಎಲ್ಲವನ್ನೂ ಮೀರಿ ನಿಂತು ವಿಶ್ವವ್ಯಾಪಿಯಾಗಿ ಬೆಳೆಯುತ್ತಿರುವುದು ಯೋಗ. ಪುರುಷ, ಮಹಿಳೆ, ಮಕ್ಕಳು, ಮುದುಕರು ಎನ್ನುವ ಭೇದವಿಲ್ಲದೆ ಎಲ್ಲರೂ ಕೂಡ ಯೋಗವನ್ನು ತಮ್ಮ ದಿನ ನಿತ್ಯದ ಬದುಕಿನಲ್ಲಿ ಅಳವಡಿಸಿಕೊಂಡು ರೋಗ ರುಜಿನಗಳಿಂದ ದೂರವಿರಲು ಸಾಧ್ಯ., ಇದರೊಂದಿಗೆ ಮಾನಸಿಕ ಸ್ವಾಸ್ಥ್ಯವನ್ನು ಸಹ ಕಾಪಿಟ್ಟುಕೊಳ್ಳಲು ಸಹಾಯ ಮಾಡುತ್ತದೆ ಎಂದು ಗಿನ್ನಿಸ್ ದಾಖಲೆ ಹೊಂದಿರುವ ಡಾ. ಶಿಲ್ಪಾ ಕೆ. ವೈದ್ಯಾಧಿಕಾರಿಗಳು, ತಾಲೂಕು ಆಯುಷ್ ಆಸ್ಪತ್ರೆ, ಕುಂದಾಪುರ ಇವರು ವಿದ್ಯಾರ್ಥಿಗಳಿಗೆ ತಿಳಿಸಿದರು.

ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕುಂದಾಪುರ, ಜಿಲ್ಲಾಡಳಿತ ಉಡುಪಿ, ಜಿಲ್ಲಾ ಪಂಚಾಯತ್ ಉಡುಪಿ, ಆಯುಷ್ ಇಲಾಖೆ ಉಡುಪಿ, ತಾಲೂಕು ಆಯುಷ್ ಆಸ್ಪತ್ರೆ, ಕುಂದಾಪುರ, ಇವರುಗಳು ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಯೋಗೋತ್ಸವ ಕಾರ್ಯಕ್ರಮದಲ್ಲಿ ದೈನಂದಿನ ಜೀವನದಲ್ಲಿ ಯೋಗದ ಮಹತ್ವ ಎನ್ನುವ ವಿಚಾರದ ಕುರಿತು ಉಪನ್ಯಾಸ ನೀಡಿ ನಂತರ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಜೇಂದ್ರ ಎಸ್ ನಾಯಕ ಕಾರ್ಯಕ್ರಮದ ಆಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಯೋಗವನ್ನು ತಮ್ಮ ದಿನನಿತ್ಯದ ಬದುಕಿನಲ್ಲಿ ಅಳವಡಿಸಿಕೊಂಡು ಅದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಾಮರಾಯ ಆಚಾರ್ಯ, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕ ನಾಗರಾಜ ಯು, ಗ್ರಂಥಪಾಲಕರಾದ ರವಿಚಂದ್ರ ಹೆಚ್. ಎಸ್. ಹಾಗು ಆಯುಷ್ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು
ಕಾರ್ಯಕ್ರಮವನ್ನು ರಾಷ್ಟ್ರೀಯ ಸೇವಾ ಯೋಜನಾ ಘಟಕ೧ ರ ಕಾರ್ಯಕ್ರಮಾಧಿಕಾರಿಯಾದ ಸಂತೋಷ ನಾಯ್ಕ ಹೆಚ್ ಸಂಘಟಿಸಿದರು.
ಕಾರ್ಯಕ್ರಮದಲ್ಲಿ ಸ್ವಯಂಸೇವಕಿಯಾರಾದ ಕವನ ಮತ್ತು ತಂಡದವರು ಪ್ರಾರ್ಥಿಸಿದರು, ಅಂಜನಾ ಸ್ವಾಗತಿಸಿದರು, ಅರ್ಪಿತಾ ವಂದಿಸಿದರು. ಹಾಗು ದಿವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!