Friday, November 8, 2024

ಡೆಂಗಿ ಜ್ವರ : ಸೊಳ್ಳೆ ಉತ್ಪತ್ತಿ ತಾಣ ನಾಶಪಡಿಸುವ ಅಭಿಯಾನಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಂಗಳೂರಿನಲ್ಲಿ ಚಾಲನೆ

ಜನಪ್ರತಿನಿಧಿ (ಮಂಗಳೂರು) : ಡೆಂಗಿ ಜ್ವರಕ್ಕೆ ಕಾರಣವಾಗುವ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ನಾಶಪಡಿಸುವ ಬೃಹತ್ ಅಭಿಯಾನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿನಲ್ಲಿ ಇಂದು(ಶುಕ್ರವಾರ) ಚಾಲನೆ ನೀಡಿದರು.

ಮಂಗಳೂರಿನಲ್ಲಿ ಆರೋಗ್ಯ ಕಾರ್ಯಕರ್ತರೊಂದಿಗೆ ಮನೆಗಳಿಗೆ ಭೇಟಿ ನೀಡಿದ ಸಚಿವರು, ನೀರು ನಿಂತ ಸ್ಥಳಗಳಲ್ಲಿ ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನ ಪರಿಶೀಲ‌ನೆ ಮಾಡಿದರು.

ಮನೆಗಳ ಅಕ್ಕಪಕ್ಕದಲ್ಲಿರುವ ತೆಂಗಿನ ಚಿಪ್ಪು, ಟಬ್ ಗಳು, ಟಯರ್ ಸೇರಿದಂತೆ ಮನೆಯ ಮಹಡಿ ಮೇಲೆ ನಿಂತಿರುವ ನೀರಿನಲ್ಲಿ ಈಡಿಸ್ ಸೊಳ್ಳೆಯ ಲಾರ್ವಾಗಳು ಉತ್ಪತ್ತಿಯಾಗಿರುವ ಸ್ಥಳಗಳನ್ನ ಪರಿಶೀಲಿಸಿದ ಸಚಿವರು, ಲಾರ್ವಾ ನಾಶಪಡಿಸಲು ಆರೋಗ್ಯ ಇಲಾಖೆ ಸಿಬ್ಬಂದಿಗಳು ಕೈಗೊಳ್ಳುತ್ತಿರುವ ಕ್ರಮಗಳನ್ನ ವೀಕ್ಷಿಸಿದರು. ಈ ಬಗ್ಗೆ ಎಚ್ಚರಿಕೆ ವಹಿಸುವಂತೆ ಸ್ಥಳೀಯ ನಿವಾಸಿಗಳಿಗೆ ಸಲಹೆ ನೀಡಿದರು.‌

ಈ ನಂತರ ವರದಿಗಾರರಿಗೆ ಸ್ಪಂದಿಸಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಡೆಂಗಿ ನಿಯಂತ್ರಣಕ್ಕೆ ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನ ನಾಶಪಡಿಸುವ ನಿಟ್ಟಿನಲ್ಲಿ ಪ್ರತಿ ಶುಕ್ರವಾರ ಆರೋಗ್ಯ ಇಲಾಖೆ ಅಭಿಯಾನದ ರೀತಿಯಲ್ಲಿ ಕಾರ್ಯಕ್ರಮವನ್ನ ಹಾಕಿಕೊಂಡಿದೆ ಎಂದು ತಿಳಿಸಿದರು.

ಸಾರ್ವಜನಿಕರು ಇಲಾಖೆಯೊಂದಿಗೆ ಕೈಜೋಡಿಸಬೇಕು. ಆರೋಗ್ಯ ಸಿಬ್ಬಂದಿಗಳು ಪ್ರತಿ ಮನೆಗಳಿಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಜನರು ತಮ್ಮ ಮನೆಯ ಸುತ್ತಮುತ್ತಲಿನಲ್ಲಿ ನೀರು ನಿಲ್ಲದಂತೆ ಎಚ್ವರಿಕೆ ವಹಿಸುವುದು ಅಗತ್ಯ. ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನ ಪತ್ತೆ ಹಚ್ಚಿ ಅದನ್ನ ನಾಶಪಡಿಸುವ ಕಾರ್ಯ ನಡೆಯುತ್ತಿದೆ ಎಂದು ಅವರು ಹೇಳಿದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!