Sunday, September 8, 2024

ಭಾರತ್ ಅಕ್ಕಿ ಮಾರಾಟವನ್ನು ನಿಲ್ಲಿಸಿದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ರಾಜ್ಯಕ್ಕೆ ಎಂಆರ್‌ಪಿ ದರದಲ್ಲಿ 29 ರೂ.ಗೆ ಕೆಜಿ ಭಾರತ್ ಅಕ್ಕಿ ಮಾರಾಟವನ್ನು ನಿಲ್ಲಿಸಿದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿ ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಂ ಅವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ವರದಿಗಾರರಿಗೆ ಸ್ಪಂದಿಸಿ ಮಾತನಾಡಿದ ಸಿಎಂ, ಕೇಂದ್ರ ಸರ್ಕಾರ ಭಾರತ್ ಅಕ್ಕಿ ಮಾರಾಟ ಸ್ಥಗಿತಗೊಳಿಸಿರುವುದರ ವಿರುದ್ಧ ನಾವು ಪ್ರತಿಭಟನೆ ಪ್ರಾರಂಭಿಸುತ್ತೇವೆ. ಅವರ ಬಳಿ ಅಕ್ಕಿ ದಾಸ್ತಾನು ಇದ್ದರೂ ಅಕ್ಕಿ ನೀಡುತ್ತಿಲ್ಲ ಎಂದರೆ ಅದು ರಾಜಕೀಯ ಎಂದು ತಿರುಗೇಟು ಕೊಟ್ಟರು.

ಚುನಾವಣೆಯಲ್ಲಿ ಲಾಭ ಪಡೆಯುವ ಉದ್ದೇಶದಿಂದ ಭಾರತ್ ಅಕ್ಕಿಯ ಮಾರಾಟ ಮಾಡಲಾಯಿತು. ಚುನಾವಣೆ ಫಲಿತಾಂಶ ಬಂದ ಮೇಲೆ ಭಾರತ್‌ ಅಕ್ಕಿ ಕೊಡುವುದನ್ನು ನಿಲ್ಲಿಸಿದ್ದಾರೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ಮಾಡಿದರು.

ನಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕೇಂದ್ರ ಸರ್ಕಾರ ಈ ರೀತಿ ಮಾಡುತ್ತಿದೆ. ಅಕ್ಕಿಯ ದಾಸ್ತಾನು ಇಲ್ಲದಿದ್ದರೆ ಅದು ಅರ್ಥವಾಗುವಂತಹದ್ದು. ಆದರೆ ಅವರ ಬಳಿ ಅಕ್ಕಿ ಇದ್ದರೂ ಅದನ್ನು ನೀಡುತ್ತಿಲ್ಲ. ‘ಅನ್ನ ಭಾಗ್ಯ’ದ ಉಚಿತ ಅಕ್ಕಿ ನೀಡುವಂತೆ ನಾವು ಕೇಂದ್ರ ಸರ್ಕಾರವನ್ನು ಸಂಪರ್ಕಿಸಿದಾಗ ಅವರು ಭಾರತೀಯ ಆಹಾರ ನಿಗಮದಲ್ಲಿ ಸಾಕಷ್ಟು ಅಕ್ಕಿ ದಾಸ್ತಾನು ಇದ್ದರೂ ಅವರು ನೀಡಲು ನಿರಾಕರಿಸಿದರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

”ಕೇಂದ್ರ ಸರ್ಕಾರ ದಲಿತರು, ಬಡವರು ಮತ್ತು ಹಿಂದುಳಿದವರ ಜೊತೆ ಇಲ್ಲ ಎಂಬುದು ಸ್ಪಷ್ಟವಾಗಿದೆ. ಎಲ್ಲಾ ಜಾತಿಯಲ್ಲೂ ಬಡವರಿದ್ದಾರೆ. ರಾಜ್ಯ ಸರ್ಕಾರವು ಸಮಾಜದ ಬಡವರಿಗೆ ಅನ್ನ ನೀಡಲು ಬಯಸಿದಾಗ ಅವರು ಅಕ್ಕಿ ನೀಡಲು ನಿರಾಕರಿಸಿದರು” ಎಂದವರು ಆರೋಪಿಸಿದರು.

ನಾವು ಅಕ್ಕಿ ಖರೀದಿಸಲು ಸಿದ್ಧರಿದ್ದರೂ ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಕರ್ನಾಟಕಕ್ಕೆ ಅಕ್ಕಿ ನೀಡುತ್ತಿಲ್ಲ ಎಂದು ಸಿಎಂ ಟೀಕಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!