spot_img
Friday, April 3, 2026
spot_img

ಜುಲೈ 23ರಂದು ಎನ್‌ಡಿಎ ನೇತೃತ್ವದ ಸರ್ಕಾರದ ಮೊದಲ ಬಜೆಟ್‌ ಮಂಡನೆ

ಜನಪ್ರತಿನಿಧಿ (ನವದೆಹಲಿ) : 18ನೇ ಲೋಕಸಭೆ ರಚನೆಯಾಗಿ ಮೋದಿ ಸರ್ಕಾರವು ತನ್ನ ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ಮಂಡಿಸಲು ಮುಂದಾಗಿದೆ.

ಕೇಂದ್ರ ಬಜೆಟ್ 2024ರ ದಿನಾಂಕಗಳನ್ನೂ ಘೋಷಿಸಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 23ರಂದು ಸಂಸತ್ತಿನಲ್ಲಿ ಬಜೆಟ್ ಮಂಡಿಸಲಿದ್ದಾರೆ.

ಸಂಸತ್ ಅಧಿವೇಶನ ಜುಲೈ 22ರಿಂದ ಆಗಸ್ಟ್ 12ರವರೆಗೆ ನಡೆಯಲಿದೆ. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ತಮ್ಮ ಮೈಕ್ರೋಬ್ಲಾಗಿಂಗ್‌ ಖಾತೆ ಎಕ್ಸ್ ನಲ್ಲಿ ಬಜೆಟ್ ಅಧಿವೇಶನದ ಬಗ್ಗೆ ಮಾಹಿತಿ ನೀಡಿದರು. 2024-25ರ ಕೇಂದ್ರ ಬಜೆಟ್ ಅನ್ನು 2024ರ ಜುಲೈ 23ರಂದು ಲೋಕಸಭೆಯಲ್ಲಿ ಮಂಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಸುದ್ದಿ ಸಂಸ್ಥೆ ರಾಯಿಟರ್ಸ್ ಎರಡು ಸರ್ಕಾರಿ ಅಧಿಕಾರಿಗಳನ್ನು ಉಲ್ಲೇಖಿಸಿ, ಕೇಂದ್ರ ಸರ್ಕಾರವು ಕೇಂದ್ರ ಬಜೆಟ್‌ನಲ್ಲಿ ಗ್ರಾಮೀಣ ವಸತಿಗಾಗಿ ರಾಜ್ಯ ಸಬ್ಸಿಡಿಯನ್ನು ಹೆಚ್ಚಿಸಲು ತಯಾರಿ ನಡೆಸುತ್ತಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ 50 ಪ್ರತಿಶತದಷ್ಟು ಹೆಚ್ಚಾಗುವ ನಿರೀಕ್ಷೆಯಿದೆ US ಡಾಲರ್ ಅನ್ನು ಮೀರುತ್ತದೆ ಎಂದು ಹೇಳಿದೆ

ನಿರ್ಮಲಾ ಸೀತಾರಾಮನ್ ದಾಖಲೆ
ಈ ವರ್ಷ ಎರಡು ಬಾರಿ ಬಜೆಟ್ ಮಂಡನೆಯಾಗುತ್ತಿದೆ. ಮಧ್ಯಂತರ ಬಜೆಟ್ ಅನ್ನು ಫೆಬ್ರವರಿ 1, 2024 ರಂದು ಮಂಡಿಸಲಾಯಿತು. ಆದರೆ ಇದೀಗ ಹೊಸ ಸರ್ಕಾರ ರಚನೆಯಾದ ನಂತರ ಪೂರ್ಣ ಪ್ರಮಾಣದ ಕೇಂದ್ರ ಬಜೆಟ್ ಮಂಡನೆಯಾಗಲಿದೆ. ಈ ಬಾರಿ ಬಜೆಟ್ ಮಂಡನೆಯೊಂದಿಗೆ ಹಾಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಿನಲ್ಲಿ ವಿಶಿಷ್ಟ ದಾಖಲೆ ದಾಖಲಾಗಲಿದೆ. ಏಕೆಂದರೆ, ಈ ಮೂಲಕ ಸತತ ಏಳು ಕೇಂದ್ರ ಬಜೆಟ್ ಮಂಡಿಸಿದ ಮೊದಲ ಹಣಕಾಸು ಸಚಿವೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಈ ವಿಷಯದಲ್ಲಿ ಅವರು ಮೊರಾರ್ಜಿ ದೇಸಾಯಿಯವರಿಗಿಂತ ಒಂದು ಹೆಜ್ಜೆ ಮುಂದಡಿಯಿಟ್ಟಿದ್ದಾರೆ . ದೇಸಾಯಿ ಅವರು ಸತತ ಆರು ಬಾರಿ ಬಜೆಟ್ ಮಂಡಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!