spot_img
Wednesday, April 1, 2026
spot_img

ಗುಜರಾತ್‌ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಕಾಂಗ್ರೆಸ್‌ ಸೋಲಿಸಲಿದೆ : ರಾಗಾ ವಿಶ್ವಾಸ

ಜನಪ್ರತಿನಿಧಿ (ಅಲಹಾಬಾದ್‌) : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಯೋಧಯೆಯಲ್ಲಿ ಸೋಲಿಸಿದ ಹಾಗೆ ಮುಂದಿನ ಗುಜರಾತ್‌ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಕಾಂಗ್ರೆಸ್‌ ಸೋಲಿಸಲಿದೆ ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದರು.

ಅಹಮದಾಬಾದ್‌ನಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

ಬಿಜೆಪಿಯವರು ನಮ್ಮ ಕಚೇರಿಗೆ ಹಾನಿ ಮಾಡುವ ಮೂಲಕ ಸವಾಲೊಡ್ಡಿದ್ದಾರೆ. ಬರೆದಿಟ್ಟುಕೊಳ್ಳಿ, ನಮ್ಮ ಕಚೇರಿಯನ್ನು ಹಾನಿ ಮಾಡಿದ ಹಾಗೆ, ನಾವು ಅವರ ಸರ್ಕಾರವನ್ನು ಕಿತ್ತೊಗೆಯಲಿದ್ದೇವೆ. ಅಯೋಧ್ಯೆಯಲ್ಲಿ ಸೋಲಿಸಿದ ಹಾಗೆ ಗುಜರಾತ್‌ನಲ್ಲಿ ಬಿಜೆಪಿ ಹಾಗೂ ಮೋದಿಯನ್ನು ನಾವು ಸೋಲಿಸಲಿದ್ದೇವೆ. ಗುಜರಾತ್‌ನಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್‌ ಹೊಸ ಆರಂಭ ಮಾಡಲಿದೆ ಎಂದು ಅವರು ಹೇಳಿದ್ದಾರೆ.

ಲೋಕಸಭೆಯಲ್ಲಿ ರಾಹುಲ್‌ ಗಾಂಧಿ ಮಾಡಿದ ಭಾಷಣದ ಬಳಿಕ ಗುಜರಾತ್‌ನ ಬಿಜೆಪಿಯ ಯುವ ಮೋರ್ಚಾ ಕಾರ್ಯಕರ್ತರು ಅಹಮದಾಬಾದನಲ್ಲಿರುವ ಕಾಂಗ್ರೆಸ್‌ ಕಚೇರಿ ʼರಾಜೀವ್‌ ಗಾಂಧಿʼ ಭವನದ ಮುಂದೆ ಪ್ರತಿಭಟಿಸಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿತ್ತು. ಇದನ್ನು ರಾಹುಲ್‌ ಗಾಂಧಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

ಘಟನೆಯಲ್ಲಿ ಉಭಯ ಪಕ್ಷದ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದರು ಎಂದು ಪೊಲೀಸರು ತಿಳಿಸಿದ್ದರು. ಘಟನೆಯಲ್ಲಿ ಸಹಾಯಕ ಕಮೀಷನರ್‌ ಒಳಗೊಂಡು ಐವರು ಪೊಲೀಸರು ಗಾಯಗೊಂಡಿದ್ದರು.

ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಗೆ ಸ್ಥಳೀಯ ಯಾವೊಬ್ಬ ವ್ಯಕ್ತಿಯನ್ನು ಆಹ್ವಾನಿಸದಿರುವುದು ಅಲ್ಲಿನ ಜನರಿಗೆ ಅಸಮಾಧಾನವಿದೆ. ಅಯೋದ್ಯೆಯಿಂದ ಸ್ಪರ್ಧೆ ಮಾಡಲು ನರೇಂದ್ರ ಮೋದಿ ಬಯಸಿದ್ದರು. ಆದರೆ ಅಲ್ಲಿ ಸ್ಪರ್ಧೆ ಮಾಡಿದರೆ ಸೋಲುವುದಾಗಿ ಸಮೀಕ್ಷೆಗಳು ಹೇಳಿದ್ದವು. ಹೀಗಾಗಿ ಅಯೋಧ್ಯೆಯಲ್ಲಿ ಸ್ಪರ್ಧೆ ಮಾಡುವುದರಿಂದ ಮೋದಿ ಹಿಂದೆ ಸರಿದಿದ್ದರು ಎಂದು ರಾಹುಲ್‌ ಹೇಳಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!