Sunday, September 8, 2024

UIDAI Recruitment 2024 : ಪದವೀಧರರಿಗೆ ಲಕ್ಷಕ್ಕೂ ಮೀರಿದ ಸಂಬಳ : ಇಲ್ಲಿದೆ ಸಂಪೂರ್ಣ ಮಾಹಿತಿ

ಜನಪ್ರತಿನಿಧಿ (ಬೆಂಗಳೂರು) : ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(UIDAI) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಡೆಪ್ಯುಟಿ ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್​ ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡಲು ನೇಮಕಾತಿ ನಡೆಸಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರು ಈ ಹುದ್ದೆಗೆ ಅರ್ಜಿ ಹಾಕಬಹುದಾಗಿದೆ. ಸೆಪ್ಟೆಂಬರ್ 2, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಹುದ್ದೆಯ ಮಾಹಿತಿ: ಡೆಪ್ಯುಟಿ ಡೈರೆಕ್ಟರ್- 3, ಅಸಿಸ್ಟೆಂಟ್ ಡೈರೆಕ್ಟರ್- 2

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್ 2, 2024ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ

ಉದ್ಯೋಗದ ಸ್ಥಳ: ಬೆಂಗಳೂರು

ವೇತನ: ಡೆಪ್ಯುಟಿ ಡೈರೆಕ್ಟರ್- ಮಾಸಿಕ ರೂ. 67,700- 2,08,700, ಅಸಿಸ್ಟೆಂಟ್ ಡೈರೆಕ್ಟರ್- ಮಾಸಿಕ ರೂ. 56,100-1,77,500.

ಅರ್ಜಿ ಸಲ್ಲಿಸುವುದು ಹೇಗೆ ? : ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ನಿರ್ದೇಶಕರು (HR)
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)
ಆಧಾರ್ ಕಾಂಪ್ಲೆಕ್ಸ್
NTI ಲೇಔಟ್
ಟಾಟಾ ನಗರ
ಕೊಡಿಗೇಹಳ್ಳಿ
ತಂತ್ರಜ್ಞಾನ ಕೇಂದ್ರ
ಬೆಂಗಳೂರು – 560092

ಅಥವಾ ಅರ್ಜಿಗಳನ್ನು ಆನ್‌ಲೈನ್‌ ಮೂಲಕವೂ ಸಲ್ಲಿಸಬಹುದಾಗಿದ್ದು, ಸೂಕ್ತ ದಾಖಲೆಗನ್ನು ಅರ್ಜಿಯನ್ನು ಇ-ಮೇಲ್ ಐಡಿ deputation@uidai.net.in ಗೆ ಕಳುಹಿಸಬದಾಗಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!