spot_img
Tuesday, March 31, 2026
spot_img

NATA ಪರೀಕ್ಷೆಯಲ್ಲಿ ರಾಜ್ಯಕ್ಕೆ 16ನೇ Rank: ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್

ಹೆಮ್ಮಾಡಿ; ರಾಷ್ಟ್ರೀಯ ಮಟ್ಟದಲ್ಲಿ ನಡೆದ NATA ಪ್ರವೇಶ ಪರೀಕ್ಷೆ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್, ಪರೀಕ್ಷೆ ಬರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ರಾಜ್ಯಕ್ಕೆ 16 ನೇ ರ್‍ಯಾಂಕ್ ಪಡೆದು, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಅದ್ವಿತೀಯ ಸಾಧನೆ ಮಾಡಿದ್ದಾರೆ.

ಹಾಗೆಯೇ ಕಾಲೇಜಿನ ಇನ್ನೋರ್ವ ವಿದ್ಯಾರ್ಥಿನಿ ವರ್ಣಾ ಆಚಾರ್ ರಾಜ್ಯ ಮಟ್ಟದ 197ನೇ ರ್‍ಯಾಂಕ್ ನ್ನು ಪಡೆಯುವುದರ ಮೂಲಕ ಸಾಧನೆ ಮೆರೆದಿದ್ದಾಳೆ.

ಈ ಮೂಲಕ ರಾಜ್ಯದ ಪ್ರತಿಷ್ಠಿತ ಇಂಜಿನಿಯರ್ ಕಾಲೇಜಿನಲ್ಲಿ ಪ್ರವೇಶಾತಿ ಪಡೆಯಲು ಅರ್ಹರಾಗಿದ್ದಾರೆ.
ಪಠ್ಯೇತರ ಚಟುವಟಿಕೆಗಳಲ್ಲಿಯೂ ಮುಂಚೂಣಿಯಲ್ಲಿರುವ ಈ ವಿದ್ಯಾರ್ಥಿನಿಯರು ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿನಿಯರಾಗಿದ್ದಾರೆ.
ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ.

ವಿದ್ಯಾರ್ಥಿನಿಯರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದಿಸಿದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!