spot_img
Tuesday, March 31, 2026
spot_img

ಪ್ರಸಿದ್ಧ ಯಕ್ಷಗಾನ ಕಲಾವಿದ ಕಪ್ಪೆಕೆರೆ ಮಹಾದೇವ ಹೆಗಡೆ ನಿಧನ

ಹೊನ್ನಾವರ: ಬಡಗುತಿಟ್ಟಿನ ಪ್ರಸಿದ್ಧ ಯಕ್ಷಗಾನ ಕಲಾವಿದ ಕಪ್ಪೆಕೆರೆ ಮಹಾದೇವ ಹೆಗಡೆ (75)  9-7-2024 ರಾತ್ರಿ ಹೊನ್ನಾವರದಲ್ಲಿ ನಿಧನರಾದರು. ಅವರು ಪತ್ನಿ ನಾಲ್ವರು ಪುತ್ರರನ್ನು ಅಗಲಿದ್ದಾರೆ.
ಪ್ರಸಿದ್ಧ ಭಾಗವತರಾದ ಅಣ್ಣ ಕಪ್ಪೆಕೆರೆ ಸುಬ್ರಾಯ ಹೆಗಡೆಯವರಲ್ಲಿ ಯಕ್ಷಗಾನ ಕಲಿತು, ಕೆರೆಮನೆ ಮಹಾಬಲ ಹೆಗಡೆಯವರ ಗರಡಿಯಲ್ಲಿ ಶ್ರೇಷ್ಠ ಕಲಾವಿದರಾಗಿ ರೂಪುಗೊಂಡಿದ್ದರು. ಗುಂಡುಬಾಳ, ಇಡಗುಂಜಿ, ಬಚ್ಚಗಾರು, ಶಿರಸಿ, ಪಂಚಲಿಂಗ, ಮಂದಾರ್ತಿ ಮೇಳಗಳಲ್ಲಿ ಐದು ದಶಕಗಳ ಕಲಾ ಸೇವೆ ಗೈದಿದ್ದರು. ಶಿರಸಿ ಮೇಳದಲ್ಲಿ ವ್ಯವಸ್ಥಾಪಕರಾಗಿಯೂ ಕಾರ್ಯ ನಿರ್ವಹಿಸಿದ್ದರು. ಖಳ ಮತ್ತು ಸಾತ್ವಿಕ ಎರಡೂ ರೀತಿಯ ಪಾತ್ರಗಳನ್ನೂ ಸಮರ್ಥವಾಗಿ ಪ್ರಸ್ತುತ ಪಡಿಸುತ್ತಾ ಕಲಾಭಿಮಾನಿಗಳ ಪ್ರೀತ್ಯಾದರಕ್ಕೆ ಪಾತ್ರರಾಗಿದ್ದರು.
ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಉಡುಪಿ ಯಕ್ಷಗಾನ ಕಲಾರಂಗ ಪ್ರಶಸ್ತಿ, ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು. ಸರಳ ಸಜ್ಜನಿಕೆಯ ಕಲಾವಿದರು ಎಂದೇ ಮಾನಿತರಾಗಿದ್ದ ಅವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್  ಕಾರ್ಯದರ್ಶಿ ಮುರಲಿ ಕಡೆಕಾರ್  ಸಂತಾಪ ವ್ಯಕ್ತಪಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!