Wednesday, September 11, 2024

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ : ಮಾಜಿ ಸಚಿವ ಬಿ. ನಾಗೇಂದ್ರ ಅವರ ಪಿಎ ಹರೀಶ್‌ ಬಂಧನ

ಜನಪ್ರತಿನಿಧಿ (ಬೆಂಗಳೂರು) : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಪಿಎ ಹರೀಶ್‌ ಅವರನ್ನು ಜಾರಿ ನಿರ್ದೇಶನಾಲಯ(ED)ದ ಅಧಿಕಾರಿಗಳು ಇಂದು(ಬುಧವಾರ) ಬಂಧಿಸಿದ್ದಾರೆ.

ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್​​ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದರು. ಇದರ ಬೆನ್ನಲ್ಲೇ ನಾಗೇಂದ್ರ ಅವರ ಪಿಎ ಹರೀಶ್ ಅವರನ್ನು ಬಂಧಿಸಲಾಗಿದೆ.

ಬಂಧಿತ ಹರೀಶ್​ ಅವ್ಯವಹಾರದ ಸಂದರ್ಭದಲ್ಲಿ ಅಧಿಕಾರಿಗಳಿಗೆ ಮೌಖಿಕ ಸೂಚನೆ ನೀಡಿದ್ದು, ಸಚಿವರ ಪರವಾಗಿ ಒತ್ತಡ ಹಾಕಿ ಹಣದ ವಹಿವಾಟು ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೈದರಾಬಾದ್‌ನ ಆರೋಪಿ ಸತ್ಯನಾರಾಯಣ ವರ್ಮಾರಿಂದ ಬಂದಿದ್ದ ಹಣ ಹರೀಶ್‌ಗೆ ತಲುಪಿತ್ತು. ಇನ್ನು, ಪಿಎ ಹರೀಶ್‌ ಏಪ್ರಿಲ್ ತಿಂಗಳಿನ ಎರಡನೇ ವಾರ ಬಿಬಿಎಂಪಿ ಕಚೇರಿಯ ಶ್ರೀನಿಧಿ ಸಾಗರ್ ಹೋಟೆಲ್ ಬಳಿ ಪದ್ಮನಾಭರಿಂದ 25 ಲಕ್ಷ ಹಣ ಪಡೆದ ಆರೋಪ ಎದುರಿಸುತ್ತಿದ್ದಾರೆ.

ಮಾಜಿ ಸಚಿವ್​ ನಾಗೇಂದ್ರ ಅವರ ಪರವಾಗಿ ಹರೀಶ್ ಹವಾಲಾ ಹಣ ಮತ್ತು ಚಿನ್ನದ ಬಿಸ್ಕೆಟ್‌ ಪಡೆದುಕೊಂಡಿದ್ದಾರೆ. ಅಲ್ಲದೆ, 50ರಿಂದ 60 ಕೋಟಿ ವ್ಯವಹಾರ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆ ನಡೆಸಲು ಇಡಿ ಅಧಿಕಾರಿಗಳು ಹರೀಶ್‌ನನ್ನು ಬಂಧಿಸಿದ್ದಾರೆ.

ವಾಲ್ಮೀಕಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣದಿಂದ ಬೇಸತ್ತು ನಿಗಮದ ಅಧೀಕ್ಷಕ ಚಂದ್ರಶೇಖರ್​ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಗರಣ ಬೆಳಕಿಗೆ ಬಂದ ಬೆನ್ನಲ್ಲೇ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!