Sunday, September 8, 2024

ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ

ಜನಪ್ರತಿನಿಧಿ (ಬಿಹಾರ) : ಬಿಹಾರದ ಸಹರ್ಸಾ ಜಿಲ್ಲೆಯಲ್ಲಿ ಇಂದು(ಬುಧವಾರ) ಮಗದೊಂದು ಸೇತುವೆ ಕುಸಿದು ಬಿದ್ದಿದೆ. ಈ ಮೂಲಕ ಮೂರು ವಾರಗಳಲ್ಲಿ ರಾಜ್ಯದಲ್ಲಿ ಹದಿಮೂರು ಸೇತುವೆಗಳು ಕುಸಿದು ಬಿದ್ದಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಬಗ್ಗೆ ಪಿಟಿಐ ಸುದ್ದಿಸಂಸ್ಥೆಗೆ ಸಹರ್ಸಾ ಹೆಚ್ಚುವರಿ ಜಿಲ್ಲಾಧಿಕಾರಿ ಜ್ಯೋತಿ ಕುಮಾರ್‌ ಪ್ರತಿಕ್ರಿಯಿಸಿದ್ದು, ಇದೊಂದು ಕಿರುಸೇತುವೆಯಾಗಿದ್ದು, ಸುತ್ತಮುತ್ತಲಿನ ಹಳ್ಳಿಗಳೊಂದಿಗೆ ಸಂಪರ್ಕ ಕಲ್ಪಿಸುತ್ತದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ಹೇಳಿದ್ದಾರೆ.

ಸಿವಾನ್‌, ಸರನ್‌, ಮಧುಬನಿ, ಅರಾರಿಯಾ, ಪೂರ್ವ ಚಂಪಾರಣ್‌ ಹಾಗೂ ಕಿಶನ್‌ಗಂಜ್‌ ಒಳಗೊಂಡು ವಿವಿಧ ಜಿಲ್ಲೆಗಳಲ್ಲಿ ಇತ್ತೀಚೆಗೆ ಸೇತುವೆ ಕುಸಿತದದ ಸರಣಿ ಘಟನೆಗಳು ಸಂಭವಿಸಿವೆ. ಬಿಹಾರ ಸರ್ಕಾರ ಈ ಸಂಬಂಧಿಸಿದಂತೆ ಹದಿನೈದು ಇಂಜಿನೀಯರ್‌ಗಳನ್ನು ಅಮಾನತುಗೊಳಿಸಿದೆ.

ಇನ್ನು, ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ರಾಜ್ಯದ ಎಲ್ಲಾ ಹಳೆಯ ಸೇತುವೆಗಳನ್ನು ಸಮೀಕ್ಷೆ ನಡೆಸಿ, ತಕ್ಷಣ ದುರಸ್ತಿ ಮಾಡಬೇಕಾದ ಸೇತುವೆಗಳನ್ನು ಗುರುತಿಸುವಂತೆ  ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!