Sunday, September 8, 2024

ಮುಡಾ ಹಗರಣ : ಸಿಎಂ, ಪತ್ನಿ ಪಾರ್ವತಿ ಸೇರಿ 10 ಮಂದಿ ವಿರುದ್ಧ ಪ್ರಕರಣ ದಾಖಲು !

ಜನಪ್ರತಿನಿಧಿ (ಮೈಸೂರು) : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಹಗರಣಕ್ಕೆ ಸಂಬಂಧಿಸಿದಂತೆ ನಕಲಿ ದಾಖಲೆ ಸಲ್ಲಿಸಿ ಸೈಟ್ ಪಡೆದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಅವರನ್ನೊಳಗೊಂಡು ಒಟ್ಟು 10 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಮುಡಾ ಹಗರಣದಲ್ಲಿ ದಿನಕ್ಕೊಂದು ಹೆಸರು ಕೇಳಿ ಬರುತ್ತಿದ್ದು, ಇದೀಗ ಮೈಸೂರು ವಿಜಯನಗರ ಪೊಲೀಸ್ ಠಾಣೆಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಮುಡಾಗೆ ವಂಚನೆ ಮಾಡಲಾಗಿದೆ ಎಂಬ ದೂರು ದಾಖಲಾಗಿದೆ. ನಕಲಿ ದಾಖಲೆ ಸಲ್ಲಿಸಿ ಸೈಟ್ ಪಡೆದ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ಒಟ್ಟು 10 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಮೂಲಗಳ ಪ್ರಕಾರ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ ದೇವರಾಜು ಮತ್ತು ಕುಟುಂಬದವರ ವಿರುದ್ಧ ದೂರು ದಾಖಲಿಸಿದ್ದಾರೆ. ಇದೇ ಪ್ರಕರಣದಲ್ಲಿ ಜಿಲ್ಲಾಧಿಕಾರಿ, ತಹಸೀಲ್ದಾರ್, ಉಪ ನೋಂದಣಾಧಿಕಾರಿ ಹಾಗೂ ಮುಡಾ ಅಧಿಕಾರಿಗಳ ಶಾಮೀಲಾಗಿದ್ದಾರೆ ಎನ್ನುವ ವಿಚಾರದ ಬಗ್ಗೆಯು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎನ್ನುವವರು ದೂರು ದಾಖಲಿಸಿದ್ದು, ಪೊಲೀಸರ ಜೊತೆಗೆ ರಾಜ್ಯಪಾಲ, ರಾಜ್ಯ ಮುಖ್ಯಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೂ ದೂರು ಪತ್ರ ಸಲ್ಲಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ದೂರಿನಲ್ಲಿ ದೂರುದಾರರು ಹಲವು ಪ್ರಶ್ನೆಗಳನ್ನು ಎತ್ತಿದ್ದು, ಪಾರ್ವತಿ ಪ್ರಕರಣದಲ್ಲಿ ಭೂ ಸ್ವಾಧೀನದಿಂದ ಕೈಬಿಟ್ಟಿರುವ ರಾಜ್ಯಪತ್ರದ ಬಗ್ಗೆಯೇ ಅನುಮಾನ ಇದೆ. ಮೂಲ ಭೂ ಮಾಲೀಕರ ಮಗ ಎನ್ನುವ ಮಲ್ಲಿಕಾರ್ಜುನಸ್ವಾಮಿ ದೇವರಾಜು ಅಸ್ತಿತ್ವದ ಬಗ್ಗೆ ಪ್ರಶ್ನೆ ಎತ್ತಲಾಗಿದೆ. 1998ರಲ್ಲಿ ಭೂ ಸ್ವಾಧಿನದಿಂದ ಕೈ ಬಿಟ್ಟಿದ್ದು ನಿಜವಾದರೆ 2010ರ ವರೆಗಿನ ಆರ್ಟಿಸಿ ಗಳಲ್ಲಿ ಭೂ ಸ್ವಾಧೀನ ಎಂಬ ಉಲ್ಲೇಖ ಏಕಿದೆ ಎಂದು ಪ್ರಶ್ನಿಸಿದ್ದಾರೆ.

1998ರಲ್ಲಿ ಭೂ ಸ್ವಾಧಿನದಿಂದ ಕೈ ಬಿಟ್ಟಿದ್ದು ನಿಜವಾದರೆ 2010ರ ವರೆಗಿನ ಆರ್ಟಿಸಿ ಗಳಲ್ಲಿ ಭೂ ಸ್ವಾಧೀನ ಎಂಬ ಉಲ್ಲೇಖ ಏಕಿದೆ. ನಂತರ ಮಲ್ಲಿಕಾರ್ಜುನಸ್ವಾಮಿ ದೇವರಾಜು ಅವರ ಮಾಲೀಕತ್ವ ಮತ್ತು ಸ್ವಾಧೀನದಲ್ಲಿ ಈ ಜಮೀನು ಇದ್ದಿದ್ದರೆ ಪ್ರಾಧಿಕಾರದ ಅಭಿವೃದ್ಧಿ ಕೆಲಸವನ್ನ ಏಕೆ ತಡೆದಿಲ್ಲ ಎಂಬಿತ್ಯಾದಿ ಪ್ರಶ್ನೆಗಳನ್ನು ಎತ್ತಿದ್ದಾರೆ.

ಮಾತ್ರವಲ್ಲದೇ ಜಿಲ್ಲಾಧಿಕಾರಿ, ತಹಶೀಲ್ದಾರ್, ಉಪ ನೋಂದಣಾಧಿಕಾರಿ ಮತ್ತು ಮುಡಾ ಅಧಿಕಾರಿಗಳು ಕೂಡ ಹಗರಣದಲ್ಲಿ ಶಾಮೀಲಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!