spot_img
Saturday, December 7, 2024
spot_img

ಮುಡಾ ಹಗರಣ : ಸಿಬಿಐಗೆ ಒಪ್ಪಿಸುವುದಿಲ್ಲ, ನಮ್ಮ ಪೊಲೀಸರು ಸಮರ್ಥರಿಲ್ಲವೇ ? : ಸಿಎಂ

ಜನಪ್ರತಿನಿಧಿ (ಮೈಸೂರು) : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧಿಕಾರಿಗಳು 50:50 ಮಾದರಿಯಲ್ಲಿ ನಿವೇಶನ ಹಂಚಿಕೆ ಮಾಡಿರುವುದನ್ನು ಸರ್ಕಾರ ರದ್ದುಗೊಳಿಸಿದ್ದು, ಇದೇ ಸಂದರ್ಭದಲ್ಲಿ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವುದಿಲ್ಲ ಎಂದು ಸ್ಪಷ್ಟ ಪಡಿಸಿದೆ.

ವರದಿಗಾರರಿಗೆ ಸ್ಪಂದಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಮುಡಾದ 50:50 ಅನುಪಾತದ ನಿವೇಶನ ಹಂಚಿಕೆ ಕುರಿತಾದ ತನಿಖೆ ಪ್ರಗತಿಯಲ್ಲಿದ್ದು, ಇಬ್ಬರು ಐಎಎಸ್‌ ಅಧಿಕಾರಿಗಳ ತಂಡದಿಂದ ತನಿಖೆ ನಡೆಯುತ್ತಿದೆ. ವರದಿ ಬಂದ ಬಳಿಕ ಕ್ರಮ ವಹಿಸುತ್ತೇವೆಂದು ಹೇಳಿದರು.

ಇದೇ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕರು ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸುತ್ತಿರುವ ಪ್ರಶ್ನೆಗೆ ಗರಂ ಆದ ಸಿದ್ದರಾಮಯ್ಯ, ”ಯಾಕೆ ನಮ್ಮ ಪೊಲೀಸರು ಸಮರ್ಥರಿಲ್ಲವೇ?,” ಎಂದು ಪ್ರಶ್ನಿಸಿದರು.

ಎಲ್ಲದಕ್ಕೂ ಸಿಬಿಐ ಎನ್ನುವ ಬಿಜೆಪಿಯವರು ತಮ್ಮ ಅವಧಿಯಲ್ಲಿ ಎಷ್ಟು ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದಾರೆ? ಎಂದು ಅವರು ಪ್ರಶ್ನಿಸಿದ್ದಲ್ಲದೇ, ಸಿಬಿಐ ಅನ್ನು ಬಿಜೆಪಿ ಚೋರ್‌ ಬಚಾವ್‌ ಸಂಸ್ಥೆ ಎನ್ನುತ್ತಿದ್ದರು. ಈಗ ಸಿಬಿಐಗೆ ಕೊಡುವಂತೆ ಒತ್ತಾಯಿಸುತ್ತಿದ್ದಾರೆ. ಈಗಿನ ಸಿಬಿಐ ಮುಖ್ಯಸ್ಥ ಕೂಡ ಕರ್ನಾಟಕದಲ್ಲಿ ಕೆಲಸ ಮಾಡಿದವರು. ನಮ್ಮ ಪೊಲೀಸರು ತನಿಖೆ ನಡೆಸಲು ಸಮರ್ಥರಿದ್ದಾರೆಂದು ಅವರು ತಿಳಿಸಿದರು.

ನನ್ನ ಪತ್ನಿ ಮುಡಾದಲ್ಲಿ ಕಾನೂನು ಬದ್ಧವಾಗಿ ನಿವೇಶನ ಪಡೆದಿದ್ದಾರೆ. ಕೆಸರೆಯಲ್ಲಿದ್ದ ಜಮೀನು ವಶ ಪಡಿಸಿಕೊಂಡ ಬಳಿಕ ಪರಿಹಾರ ಕೊಡುವಂತೆ ಮುಡಾಗೆ ನನ್ನ ಪತ್ನಿ ಪತ್ರ ಬರೆದಿದ್ದರು. ಪ್ರಾಧಿಕಾರದ ಸಭೆಯಲ್ಲಿ ತಪ್ಪೊಪ್ಪಿಕೊಂಡು ವಿಜಯನಗರದಲ್ಲಿ ನಿವೇಶನ ಕೊಟ್ಟಿದ್ದಾರೆ. ನಾವು ವಿಜಯನಗರದಲ್ಲಿ ನಿವೇಶನ ಕೊಡುವಂತೆ ಕೇಳಿರಲಿಲ್ಲ. ನಿಮ್ಮ ಜಮೀನನ್ನು ವಶಪಡಿಸಿಕೊಂಡಿದ್ದರೆ ಪರಿಹಾರ ಕೇಳುತ್ತಿರಲಿಲ್ಲವೇ? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಮುಡಾದಿಂದ ನಿವೇಶನ ಪಡೆದಿರುವುದರಲ್ಲಿ ಯಾವುದೇ ತೊಡಕಿಲ್ಲ ಎಂದು ತಿಳಿಸಿದರು.

ಮುಡಾ ನಿವೇಶನ ಹಂಚಿಕೆಯನ್ನು ಬಿಜೆಪಿಯವರು ರಾಜಕೀಯ ಕಾರಣಕ್ಕಾಗಿ ವಿವಾದ ಮಾಡುತ್ತಿದ್ದಾರೆ. ಬೆಂಗಳೂರಲ್ಲಿ ನಮ್ಮ ಮನೆಗೆ ಮುತ್ತಿಗೆ, ಪ್ರತಿಭಟನೆ ಮಾಡಿದ್ದರು. ಈಗ ಮೈಸೂರಲ್ಲಿ ಪ್ರತಿಭಟನೆ ಮಾಡುವುದಾಗಿ ಹೇಳಿದ್ದಾರೆ. ಪ್ರತಿಭಟನೆ ಮಾಡಲಿ ನಮ್ಮದೇನು ಅಭ್ಯಂತರವಿಲ್ಲ. ಮುಡಾ ನಿವೇಶನ ಹಂಚಿಕೆ ಸಂಬಂಧ ಜು. 15ರಿಂದ ಆರಂಭವಾಗುವ ಅಧಿವೇಶನದಲ್ಲಿಯೇ ಉತ್ತರ ಕೊಡುತ್ತೇವೆ ಎಂದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!