Friday, November 8, 2024

ಕೆನರಾ ಬ್ಯಾಂಕ್‌ನಲ್ಲಿ ಉದ್ಯೋಗವಕಾಶ : ಇಲ್ಲಿದೆ ಸಂಪೂರ್ಣ ಮಾಹಿತಿ

ಜನಪ್ರತಿನಿಧಿ : ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್​ಗಳಲ್ಲಿ ಒಂದಾದ ಕೆನರಾ ಬ್ಯಾಂಕ್ ನಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.​​  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಮುಖ್ಯ ಅರ್ಥಶಾಸ್ತ್ರಜ್ಞ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಜುಲೈ 28, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ:
ಕೆನರಾ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಕನಾಮಿಕ್ಸ್​/ಎಕನಾಮಿಟ್ರಿಕ್ಸ್​​ನಲ್ಲಿ ಸ್ನಾತಕೋತ್ತರ ಪದವಿ, ಡಾಕ್ಟರಲ್ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಅಭ್ಯರ್ಥಿಗಳ ವಯಸ್ಸು ಮಾರ್ಚ್​ 1, 2024ಕ್ಕೆ ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇದೆ.

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ವೇತನ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ನೀಡಲಾಗುತ್ತದೆ.

ಉದ್ಯೋಗದ ಸ್ಥಳ:
ಬೆಂಗಳೂರು

ಆಯ್ಕೆ ಪ್ರಕ್ರಿಯೆ: ಸ್ಕ್ರೀನಿಂಗ್, ಶಾರ್ಟ್​ಲಿಸ್ಟಿಂಗ್, ಇಂಟರ್​ಯಾಕ್ಷನ್, ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಈ ಕೆಳಗಿನ ಲಿಂಕ್‌ ಮೂಲಕ ಆನ್‌ಲೈನ್‌ ಅರ್ಜಿ ಸಲ್ಲಿಸಬಹುದು.

ಕೆನರಾ ಬ್ಯಾಂಕ್‌ನಲ್ಲಿ ಉದ್ಯೋಗವಕಾಶ : ಈ ಲಿಂಕ್‌ ಕ್ಲಿಕ್‌ ಮಾಡುವ ಮೂಲಕ ಅರ್ಜಿ ಸಲ್ಲಿಸಿ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!