spot_img
Tuesday, March 31, 2026
spot_img

ಬಜೆಟ್‌ ಮಂಡನೆಗೂ ಮುನ್ನಾ ಆರ್ಥಿಕ ತಜ್ಞರನ್ನು ಭೇಟಿ ಮಾಡಿದ ನಮೋ

ಜನಪ್ರತಿನಿಧಿ (ನವ ದೆಹಲಿ) : ಕೇಂದ್ರ ಬಜೆಟ್‌ಗೆ ಇನ್ನೇನು ಕೆಲವು ದಿನಗಳು ಉಳಿದಿದ್ದು, ಇಂದು(ಗುರುವಾರ) ಆರ್ಥಿಕ ತಜ್ಞರರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ. ಬಜೆಟ್ ಬಗ್ಗೆ ಆರ್ಥಿಕ ತಜ್ಞರ ಅಭಿಪ್ರಾಯ ಹಾಗೂ ಸಲಹೆ ಪಡೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಅವರ ಸಲಹೆಗಳು ಮತ್ತು ಅಭಿಪ್ರಾಯಗಳನ್ನು ಮೋದಿ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಜು. 23ರಂದು ಹದಿನೆಂಟನೆಯ ಲೋಕಸಭೆಯ ಮೊಟ್ಟಮೊದಲ ಬಜೆಟ್‌ ಮಂಡಿಸಲಿದ್ದಾರೆ.

ಆರ್ಥಿಕ ತಜ್ಞರ ಜೊತೆಗೆ ವಲಯವಾರು ನುರಿತ ವ್ಯಕ್ತಿಗಳು, ನೀತಿ ಆಯೋಗದ ಉಪಾಧ್ಯಕ್ಷರಾದ ಸುಮನ್ ಬೆರ್ರಿ ಹಾಗೂ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕಂಪನಿ ವ್ಯವಹಾರಗಳ ಖಾತೆ ರಾಜ್ಯ ಸಚಿವ ರಾವ್ ಇಂದ್ರಜಿತ್ ಸಿಂಗ್, ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತ ನಾಗೇಶ್ವರನ್ ಮತ್ತು ಆರ್ಥಿಕ ತಜ್ಞ ಸುರ್ಜಿತ್ ಭಲ್ಲಾ ಮತ್ತು ಅಶೋಕ್ ಗುಲಾಟಿ ಹಾಗೂ ಬ್ಯಾಂಕ‌ರ್ ಕೆ.ವಿ. ಕಾಮತ್‌ ಮತ್ತಿತರರು ಉಪಸ್ಥಿತರಿದ್ದರು.

ಮೋದಿಯವರ ನೇತೃತ್ವದ ಮೂರನೇ ಅವಧಿ ಸರ್ಕಾರದ ಮೊದಲ ಬಜೆಟ್ ಇದಾಗಿದ್ದು, 2047ಕ್ಕೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಘೋಷಿಸುವ ನಿರೀಕ್ಷೆ ಇದೆ ಎಂದು ವರದಿ ಹೇಳಿದೆ.

ಆರ್ಥಿಕ ತಜ್ಞರು, ಕೈಗಾರಿಕೋದ್ಯಮಿಗಳು ಸೇರಿದಂತೆ ಹಲವರ ಜೊತೆ ಈಗಾಗಲೇ ನಿರ್ಮಲಾ ಸೀತಾರಾಮನ್‌ ಸಭೆ ನಡೆಸಿದ್ದಾರೆ ಎಂದೂ ವರದಿ ಇದೆ.

ಇನ್ನು, ಮೋದಿ ಹಾಗೂ ನಿರ್ಮಲಾ ಸೀತಾರಾಮನ್‌ ಅವರು ಭೇಟಿ ಮಾಡಿದ ಬಹುತೇಕ ಎಲ್ಲಾ ಆರ್ಥಿಕ ತಜ್ಞರು ಸಾಮಾನ್ಯ ಜನರಿಗೆ ತೆರಿಗೆಯಿಂದ ವಿನಾಯಿತಿ ನೀಡುವಂತೆ ಮನವಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಾರಿ ಲೋಕಸಭೆಯ ಚುನಾವಣೆ ಇದ್ದುದರಿಂದ ಹಿಂದಿನ ಸರ್ಕಾರದಲ್ಲೂ ವಿತ್ತ ಸಚಿವೆಯಾಗಿದ್ದ ನಿರ್ಮಲಾ ಸೀತಾರಾಮನ್ ಕಳೆದ ಫೆಬ್ರುವರಿಯಲ್ಲಿ ಮಧ್ಯಂತರ ಬಜೆಟ್ ಮಂಡಿಸಿದ್ದರು ಎನ್ನುವುದು ಇಲ್ಲಿ ಉಲ್ಲೇಖಾರ್ಹ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!