spot_img
Friday, January 17, 2025
spot_img

ಡೆಂಗಿ ಜ್ವರ ಪತ್ತೆ ಪರೀಕ್ಷೆ: ಪರಿಷ್ಕೃತ ದರ

ಉಡುಪಿ: ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು, ಖಾಸಗಿ ಪ್ರಯೋಗ ಶಾಲೆಗಳು ಹಾಗೂ ಡಯಾಗ್ನೋಸ್ಟಿಕ್ ಲ್ಯಾಬೋರೇಟರಿಗಳಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020, ಸೆಕ್ಷನ್ 4(1) ಮತ್ತು 4(2) ಕೆ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಡೆಂಗಿ ಜ್ವರ ಪತ್ತೆ ಹಚ್ಚುವ ಪರೀಕ್ಷೆಗಳಾದ Dengue ELISA NS1ಗೆ 300 ರೂ, Dengue ELISA  lgM ಗೆ ೩೦೦ ರೂ. ಹಾಗೂ Screening test Rapid card test for NS1, lgM & lgG ಗೆ ಒಟ್ಟು 250 ರೂ. ಪರಿಷ್ಕೃತ ದರ ನಿಗಧಿಪಡಿಸಿ, ಆದೇಶಿಸಲಾಗಿದ್ದು, ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು, ಖಾಸಗಿ ಪ್ರಯೋಗ ಶಾಲೆಗಳು ಹಾಗೂ ಡಯಾಗ್ನೋಸ್ಟಿಕ್ ಲ್ಯಾಬೋರೇಟರಿಗಳು ಪರಿಷ್ಕೃತ ದರಗಳನ್ನು ನಿಗಧಿಪಡಿಸಿ ಹೊರಡಿಸಿರುವ ಆದೇಶವನ್ನು ಪಾಲಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

 

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!