Sunday, September 8, 2024

ಮಾತು ನಿಲ್ಲಿಸಿದ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ! | ʼಅಚ್ಚಗನ್ನಡವನ್ನು ಸ್ಪಷ್ಟವಾಗಿ ಆಡುವಾಕೆʼ ವಿಧಿವಶ

ಜನಪ್ರತಿನಿಧಿ(ಬೆಂಗಳೂರು) : ಕನ್ನಡ ಸ್ಪಷ್ಟವಾಗಿ ಮಾತನಾಡುವುದರಲ್ಲೇ ಖ್ಯಾತಿ ಪಡೆದಿದ್ದ ಖ್ಯಾತ ನಿರೂಪಕಿ ಅಪರ್ಣಾ ಅವರು ಇಂದು(ಗುರುವಾರ) ವಿಧಿವಶರಾಗಿದ್ದಾರೆ. ಅಪರ್ಣಾ ʼಅಚ್ಚಗನ್ನಡವನ್ನು ಸ್ಪಷ್ಟವಾಗಿ ಆಡುವಾಕೆʼ ಎಂದೇ ಖ್ಯಾತರಾಗಿದ್ದರು.

ಕನ್ನಡ ಚಿತ್ರರಂಗದಲ್ಲಿ ಬಹಳ ಸಕ್ರಿಯವಾಗಿದ್ದ ಖ್ಯಾತ ನಟಿ ಮತ್ತು ನಿರೂಪಕಿ ಅಪರ್ಣಾ ಇನ್ನಿಲ್ಲ ಎಂಬ ಸುದ್ದಿ ಕೇಳಿ ಕನ್ನಡಿಗರ ಪಾಲಿಗೆ ಆಘಾತ ಸೃಷ್ಟಿಯಾಗಿದೆ.

ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ಅವರು ಕಳೆದ ಹಲವು ತಿಂಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಅಪರ್ಣಾ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೇ ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ. ಅವರು ಬನಶಂಕರಿಯಲ್ಲಿರುವ ಸ್ವ ಗೃಹದ ಲ್ಲಿ ನಿಧನವಾಗಿದ್ದಾರೆ.

ಬನಶಂಕರಿ 2ನೇ ಹಂತದ ದೇವಗಿರಿ ದೇವಸ್ಥಾನದ ಸಮೀಪದಲ್ಲಿರುವ ನಿವಾಸದಲ್ಲಿ ಅಪರ್ಣಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಯಾರು ಈ ಅಪರ್ಣಾ?
1989 ರಲ್ಲಿ ನಿರೂಪಕಿಯಾಗಿ ಟೆಲಿವಿಷನ್ ನಲ್ಲಿ ಕಾಣಿಸಿಕೊಂಡಿದ್ದರು. ಸುಸ್ಪಷ್ಟ ಕನ್ನಡದ ನಿರೂಪಣೆಗೆ ಖ್ಯಾತನಾಮರಾಗಿದ್ದ ಅಪರ್ಣಾ, ನಟಿಯಾಗಿಯೂ ಗುರುತಿಸಿಕೊಂಡಿದ್ದರು. 1984ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್​ ಅವರ ‘ಮಸಣದ ಹೂವು’ ಚಿತ್ರದಿಂದ ಬೆಳಕಿಗೆ ಚಿತ್ರನಟಿಯಾಗಿಯೂ ಗುರುತಿಸಿಕೊಂಡರು. ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದರು.

90ರ ದಶಕದಲ್ಲೇ ಚಂದನ ವಾಹಿನಿಯಲ್ಲಿ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದರು ಅಪರ್ಣಾ. ನಂತರ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. 1998 ರಲ್ಲೇ ದೀಪಾವಳಿ ಕಾರ್ಯಕ್ರಮದಲ್ಲಿ 8 ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು ಎನ್ನುವುದು ಉಲ್ಲೇಖಾರ್ಹ.

ಮೂಡಲ ಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟಿಸಿ ಜನಪ್ರಿಯರಾಗಿದ್ದರು. 2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ನಿಭಾಯಿಸಿ ಕನ್ನಡಿಗರಿಗೆ ನಗುವನ್ನೂ ಉಣಬಡಿಸಿದ್ದರು.

ಕಿರಿತೆರೆಯ ಅನೇಕ ಕಾರ್ಯಕ್ರಮಗಳನ್ನು ಅಪರ್ಣಾ ನಡೆಸಿಕೊಟ್ಟಿದ್ದರು. ನಮ್ಮ ಮೆಟ್ರೋ ಅನೌನ್ಸ್​ಮೆಂಟ್​ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಅವರು ಧ್ವನಿ ನೀಡಿದ್ದರು.

ಅಸಂಖ್ಯ ಸರ್ಕಾರಿ ಕಾರ್ಯಕ್ರಮಗಳಲ್ಲಿ ನಿರೂಪಕಿಯಾಗಿ ಕಾರ್ಯ ನಿರ್ವಹಿಸಿ ಜನಪ್ರಿಯರಾಗಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!