spot_img
Saturday, February 14, 2026
spot_img

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ವಶಕ್ಕೆ ಪಡೆದ ಜಾರಿ ನಿರ್ದೇಶನಾಲಯ

ಜನಪ್ರತಿನಿಧಿ (ಬೆಂಗಳೂರು) : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಇಂದು(ಶುಕ್ರವಾರ) ಬೆಳ್ಳಂಬೆಳಗ್ಗೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ವಶಕ್ಕೆ ಪಡೆದುಕೊಂಡಿದೆ.

ಹಗರಣದಲ್ಲಿ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಖಾತೆಗೆ ಇತ್ತೀಚಿಗೆ ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಿದ್ದರು. ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗಾಗಿ ಶಾಂತಿನಗರದ ಕಚೇರಿಗೆ ಇಡಿ ಅಧಿಕಾರಿಗಳು ಕರೆದೊಯ್ದಿದ್ದಾರೆ.

ಹಗರಣ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಕಳೆದ ಎರಡ್ಮೂರು ದಿನಗಳಿಂದ ವಿವಿಧೆಡೆ ದಾಳಿ ನಡೆಸಿದ್ದರು. ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್ ನಿವಾಸಗಳಲ್ಲಿ ಶೋಧ ಕಾರ್ಯ ನಡೆದಿತ್ತು. ಒಟ್ಟು ಹದಿನೆಂಟು ಕಡೆ ದಾಳಿ ಮಾಡಿ ಅಕ್ರಮ ವ್ಯವಹಾರದ ದಾಖಲೆ ಪತ್ರಗಳ ಪರಿಶೀಲನೆ ನಡೆಸಿತ್ತು. ಬಸವನಗೌಡ ದಡ್ಡಲ್ ಅವರ ಮಾಜಿ ಪಿಎ ಪಂಪಣ್ಣ ಮನೆ ಮೇಲೂ ಇಡಿ ದಾಳಿ ನಡೆದಿದ್ದು, ಅಕ್ರಮಗಳ ಮಾಹಿತಿ ಲಭ್ಯವಾಗಿತ್ತು.

ಹಗರಣದಲ್ಲಿ ಪಂಪಣ್ಣ 50 ಲಕ್ಷ ರೂಪಾಯಿ ಕಮಿಷನ್ ಪಡೆದಿರುವ ಆರೋಪ ಕೇಳಿಬಂದಿತ್ತು. ಪಂಪಣ್ಣ ಹಗರಣ ಕುರಿತು ಬಾಯಿ ಬಿಟ್ಟಿದ್ದಾನೆ ಎನ್ನಲಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!