Sunday, September 8, 2024

ಗದ್ದೆಗಿಳಿದರು ವಿದ್ಯಾರ್ಥಿಗಳು| ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕುಂದಾಪುರ ನೇತೃತ್ವದಲ್ಲಿ ‘ಕೃಷಿಯ ಕಡೆ ನಮ್ಮ ನಡೆ’

ಕುಂದಾಪುರ: (ಜನಪ್ರತಿನಿಧಿ ವಾರ್ತೆ)ವಿದ್ಯಾರ್ಥಿಗಳಿಗೆ ಸಾಂಪ್ರದಾಯಿಕ ಕೃಷಿ ಪದ್ದತಿಯ ಬಗ್ಗೆ ಅರಿವು ಮೂಡಿಸುವ ಕಾರ್ಯ ಶ್ಲಾಘನೀಯವಾದುದು. ಭತ್ತದ ಬೇಸಾಯದ ಜೊತೆಯಲ್ಲಿ ಕೃಷಿ ಸಂಸ್ಕೃತಿಯನ್ನು ತಿಳಿಸಿಕೊಡುವ ಜವಬ್ದಾರಿಯನ್ನು ಸ್ಕೌಟ್ -ಗೈಡ್ಸ್ ಹಾಗೂ ವಿವಿಧ ಸಂಘಟನೆಗಳಿಂದ ಆಗುತ್ತಿರುವುದು ಇವತ್ತಿನ ಕಾಲಘಟ್ಟಕ್ಕೆ ಅತ್ಯಂತ ಪೂರಕ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಅವರು ಜು.12ರಂದು ಕುಂದಾಪುರ ಮಂಗಲಪಾಂಡೆ ರಸ್ತೆಯ ಕೋಟ್ಯಾನ್ ಕುಟುಂಬಸ್ಥರ ಗದ್ದೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕುಂದಾಪುರ ನೇತೃತ್ವದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಕಾರದೊಂದಿಗೆ ವಿದ್ಯಾರ್ಥಿಗಳಿಗೆ ಆಯೋಜಿಸಿದ ‘ಕೃಷಿಯ ಕಡೆ ನಮ್ಮ ನಡೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಕೌಟ್ ಹಾಗೂ ಗೈಡ್ಸ್ ಕುಂದಾಪುರದ ಅಧ್ಯಕ್ಷೆ ಗುಣರತ್ನ ಅವರು, ಭಾರತ್ ಸ್ಕೌಟ್ ಮತ್ತು ಗೈಡ್ಸ್ ವತಿಯಿಂದ ವಿದ್ಯಾರ್ಥಿಗಳಿಗೆ ಕಳೆದ 10 ವರ್ಷಗಳಿಂದ ಕೃಷಿಯ ಕಡೆ ನಮ್ಮ ನಡೆ ಕಾರ್ಯಕ್ರಮ ಆಯೋಜಿಸಿಕೊಂಡು ಬರುತ್ತಿದೆ. ಮಕ್ಕಳಿಗೆ ಕೃಷಿಯ ಪ್ರಾಯೋಗಿಕ ಅರಿವು ನೀಡುವ ಕೆಲಸವನ್ನು ಮಾಡುತ್ತಿದ್ದೇವೆ ಎಂದರು.

ಸ್ಕೌಟ್ ಹಾಗೂ ಗೈಡ್ಸ್ ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನಾ ಶೇಖರ್, ಸಂಪನ್ಮೂಲ ವ್ಯಕ್ತಿ ಸುನೀತಾ ಬಾಂಜ್, ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ರೇಖಾ ಕೆ.ಯು., ಸಮಾಜ ಸೇವಕ ಸತೀಶ್ ಕೋಟ್ಯಾನ್ ಮತ್ತು ಸುಮಿತ್ರಾ ಕೋಟ್ಯಾನ್, ಸಂಸ್ಥೆಯ ಉಪಾಧ್ಯಕ್ಷ ಕೆ.ಆರ್ ನಾಯಕ್, ಕೋಟ್ಯಾನ್ ಕುಟುಂಬಸ್ಥರು, ಸ್ಥಳೀಯ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

ಭಾರತ್ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಕಾರ್ಯದರ್ಶಿ ಅನಂದ ಅಡಿಗ ಪ್ರಸ್ತಾವಿಸಿದರು. ಶಿಕ್ಷಕಿ ತಾರದೇವಿ ಸ್ವಾಗತಿಸಿ, ಸಂಸ್ಥೆಯ ಖಜಾಂಚಿ ವೀರೇಂದ್ರ ವಂದಿಸಿದರು. ತೆಕ್ಕಟ್ಟೆ ಕುವೆಂಪು ಶತಮಾನೋತ್ಸವ ಶಾಲೆಯ ಸ್ಕೌಟ್ ಶಿಕ್ಷಕ ಸದಾನಂದ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಹದಗೊಳಿಸಿದ ಗದ್ದೆಗಿಳಿದ ವಿದ್ಯಾರ್ಥಿಗಳು ಸಾಂಪ್ರಾದಾಯಿಕ ಶೈಲಿಯಲ್ಲಿ ನೇಜಿಯನ್ನು ನೆಟ್ಟು ಖುಷಿ ಪಟ್ಟರು. ಕುಂದಾಪುರರ ವಲಯದ 7 ಶಾಲೆಗಳ 240 ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಂಪೂರ್ಣವಾಗಿ ಮರೆಯಾಗುತ್ತಿರುವ ಸಾಂಪ್ರಾದಾಯಿಕ ನಾಟಿ ಪದ್ದತಿಯ ಅನುಭವನ್ನು ಸ್ವತಃ ಮಕ್ಕಳು ಪಡೆದುಕೊಂಡರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!